SHIVAMOGGA | ಮಾಜಿ ಸಚಿವ ಬಿ.ಸಿ.ಪಾಟೀಲ್ (B.C.Patil) ಅಳಿಯ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ದಾವಣಗೆರೆ (Davanagere)ಯಲ್ಲಿ ನಡೆದಿದೆ.
ಕಾಣೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ !
ಕೆ.ಜಿ.ಪ್ರತಾಪ್ ಕುಮಾರ್ (41) ಆತ್ಮಹತ್ಯೆಗೆ ಶರಣಾದವರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರಾ ಬಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ.

ಅರಕೆರಾ ಬಳಿ ಕಾಡಂಚಿನಲ್ಲಿ ರಸ್ತೆ ಬಳಿ ಕಾರು ನಿಲ್ಲಿಸಿ ವಿಷ ಸೇವೇಸಿ ಅಸ್ವಸ್ಥರಾಗಿದ್ದ ಪ್ರತಾಪ್ ಕುಮಾರ್ ಅವರನ್ನು ಸ್ಥಳೀಯರು ಕಂಡು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಕುಮಾರ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಯಾವ ಕಾರಣಕ್ಕೆ ಪ್ರತಾಪ್ ಈ ನಿರ್ಧಾರ ಕೈಗೊಂಡಿದ್ದಾರೆ ಎಂಬ ಬಗ್ಗೆ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
Zika Virus | ವೃದ್ಧ ಸಾವಿನ ಬೆನ್ನಲ್ಲೇ ಸಾಗರ ಮೂಲದ ಯುವಕನಲ್ಲೂ ಝಿಕಾ ವೈರಸ್ ಸೋಂಕು ಪತ್ತೆ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.