ಇಂದು ಶಿವಮೊಗ್ಗಕ್ಕೆ ಗೃಹ ಸಚಿವ ಜಿ ಪರಮೇಶ್ವರ್, ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಗೊತ್ತಾ ?

Written by Mahesha Hindlemane

Published on:

SHIVAMOGGA | ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಮತ್ತು ತೀರ್ಥಹಳ್ಳಿ ತಾಲೂಕುಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಧ್ಯಾಹ್ನ 12:30ಕ್ಕೆ ಸೊರಬದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪೊಲೀಸ್ ವಸತಿಗೃಹಗಳ ಸಮುಚ್ಛಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 3:45 ರಿಂದ 4:15ರವರೆಗೆ ತೀರ್ಥಹಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪೊಲೀಸ್ ಠಾಣಾ ಕಟ್ಟಡ, ಪೊಲೀಸ್ ವಸತಿಗೃಹಗಳ ಸಮುಚ್ಛಯ ಮತ್ತು ನೂತನ ಅಗ್ನಿಶಾಮಕ ಠಾಣಾ ಕಟ್ಟಡದ ಉದ್ಘಾಟನಾ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4:15ಕ್ಕೆ ರಸ್ತೆ ಮೂಲಕ ಬೆಂಗಳೂರಿಗೆ ವಾಪಾಸ್ಸಾಗಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment