THIRTHAHALLI | ಮಲೆನಾಡಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆ (Heavy Rain)ಯಿಂದಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಧರೆ ಕುಸಿದಿದ್ದು ತಾತ್ಕಾಲಿಕವಾಗಿ ವಾಹನ (Vehicles) ಸಂಚಾರ ಸ್ಥಗಿತಗೊಳಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 169ಎ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ರಸ್ತೆಯ ಮೇಲೆ ಮಣ್ಣು ಕುಸಿದು ಬಿದ್ದಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜೆಸಿಬಿ ಯಂತ್ರ ಬಳಸಿ ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

2023ರಲ್ಲಿ 57 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಬದಲಿ ಸೇತುವೆ ಮಾರ್ಗ ಇದಾಗಿದ್ದು ಧರೆ ಕುಸಿದಿದ್ದರಿಂದ ಸದ್ಯ ಬದಲಿ ಮಾರ್ಗವಾಗಿ ತೀರ್ಥಹಳ್ಳಿ ಪಟ್ಟಣದ ಮೂಲಕ ಕಮಾನು ಸೇತುವೆ ಮೂಲಕ ಸಂಚರಿಸಬೇಕಿದೆ.
ಇನ್ನೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಎನ್.ಆರ್.ಪುರ, ಶೃಂಗೇರಿ, ಮೂಡಿಗೆರೆ, ಕಳಸ ಹಾಗೂ ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನಾದ್ಯಂತ ಧಾರಾಕಾರವಾಗಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಸಾಗರ ಮತ್ತು ಹೊಸನಗರ ತಾಲೂಕಿನಾದ್ಯಂತ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.