HOSANAGARA | ಮಳೆ(ಲೆ)ನಾಡಿನ ತವರೂರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ.
School Holidays | ಭಾರಿ ಮಳೆ ಹಿನ್ನೆಲೆ, ಶಿವಮೊಗ್ಗ ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ಮಂಗಳವಾರ ರಜೆ
ಮಂಗಳವಾರ ಬೆಳಿಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಮಾಸ್ತಿಕಟ್ಟೆಯಲ್ಲಿ 247 ಮಿಲಿ ಮೀಟರ್ ಅತ್ಯಧಿಕ ಮಳೆ ಸುರಿದಿದೆ.

ಮತ್ತೆಲ್ಲೆಲ್ಲಿ ಎಷ್ಟು ಮಳೆಯಾಗಿದೆ ?
- ಹುಲಿಕಲ್ : 245 mm
- ಮಾಣಿ : 240 mm
- ಯಡೂರು : 229 mm
- ಸಾವೇಹಕ್ಲು : 210 mm
- ಕಾರ್ಗಲ್ (ಸಾಗರ) : 194 mm
- ಬಿದನೂರುನಗರ : 157 mm
- ಹೊಸನಗರ : 138 mm
- ಹುಂಚ : 125.4 mm
- ಅರಸಾಳು : 91.8 mm
ಲಿಂಗನಮಕ್ಕಿ ಜಲಾಶಯ :
1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಇಂದು ಬೆಳಿಗ್ಗೆ 8:00 ಗಂಟೆಗೆ 1782.15 ಅಡಿ ತಲುಪಿದ್ದು ಜಲಾಶಯಕ್ಕೆ 77911 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೆ ಅವಧಿಗೆ ಜಲಾಶಯದ ನೀರಿನ ಮಟ್ಟ 1755.90 ಅಡಿ ದಾಖಲಾಗಿತ್ತು. ಸೋಮವಾರ ಒಂದೇ ದಿನ ಜಲಾಶಯಕ್ಕೆ 4 ಅಡಿಗಳಷ್ಟು ನೀರು ಹರಿದು ಜಲಾಶಯ ಶೇ. 37.47 ಭಾಗ ಭರ್ತಿಯಾಗಿದೆ. ಇಂದು ಸಹ ಪುನರ್ವಸು ಮಳೆ ಅಬ್ಬರ ತಾಲೂಕಿನಲ್ಲಿ ಮುಂದುವರೆದಿದೆ.
Arecanut Price 15 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.