HOSANAGARA | ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಪ್ರಯಾಣಿಕರು ಪರದಾಡಿದ ಘಟನೆ ಯಡೂರು ಬಳಿಯ ಹಳಗುಂದ ಗ್ರಾಮದಲ್ಲಿ ನಡೆದಿದೆ.
ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮರ ಬಿದ್ದು ಹೊಸನಗರ ತಾಲೂಕಿನ ಹಳಗುಂದ ಗ್ರಾಮದಲ್ಲಿ ತೀರ್ಥಹಳ್ಳಿ – ಮಾಸ್ತಿಕಟ್ಟೆ – ಕುಂದಾಪುರ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಮಂಗಳೂರು, ಉಡುಪಿ, ಕುಂದಾಪುರ, ಮಣಿಪಾಲ ಹೋಗುವ ಪ್ರಯಾಣಿಕರ ಪರದಾಡುವಂತಾಗಿದೆ.
ರಾತ್ರಿ ಮೂರು ಗಂಟೆಯಿಂದ ರಸ್ತೆ ಬದಿ ಎರಡು ಕಡೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಆಗುಂಬೆಯಲ್ಲಿ ಭಾರಿ ವಾಹನಗಳ ನಿಷೇಧದ ಬೆನ್ನಲ್ಲೇ ಮಂಗಳೂರು ತಲುಪಲು ಬದಲಿ ಮಾರ್ಗ ಇದಾಗಿತ್ತು.

ಈ ಬದಲಿ ವ್ಯವಸ್ಥೆಯೂ ಮಳೆ ಗಾಳಿಯಿಂದಾಗಿ ಅವ್ಯವಸ್ಥೆಗೊಂಡು ಬೆಳಗ್ಗೆ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಮರ ತೆರವುಗಳಿಸಿದ್ದಾರೆ. ಸುಮಾರು ಮೂರು ಗಂಟೆ ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ರಸ್ತೆ ಸಂಚಾರ ಸ್ಥಗಿತ ಹಿನ್ನಲೆ ವಾಹನದಲ್ಲಿಯೇ ಕೆಲ ಕಾಲ ಪ್ರಯಾಣಿಕರು ಕಳೆಯವಂತಾಗಿ ಅವ್ಯವಸ್ಥೆಗೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.