HOSANAGARA | ಕಳೆದೊಂದು ವಾರದಿಂದ ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆಯಾಗುತ್ತಿದ್ದು ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮಂಗಳವಾರದಿಂದ ಶನಿವಾರದವರೆಗೆ ತಾಲೂಕಿನ ಎಲ್ಲಾ, ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಮಳೆ ಪ್ರಮಾಣ ಕೊಂಚ ತಗ್ಗಿದ ಹಿನ್ನೆಲೆಯಲ್ಲಿ ಜು.22 ಸೋಮವಾರದಿಂದ ಎಂದಿನಂತೆ ಶಾಲೆಗಳು ಪ್ರಾರಂಭವಾಗೊಳ್ಳುತ್ತಿವೆ.
ಇನ್ನೂ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್ ಕೃಷ್ಣಮೂರ್ತಿ ಶಿಕ್ಷಕರಿಗೆ ಮಾಹಿತಿಯೊಂದನ್ನು ನೀಡಿದ್ದು, ತಾಲೂಕಿನಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದ್ದು, ನಾಳೆಯಿಂದ ಶಾಲೆಗಳು ಪುನಃ ಆರಂಭವಾಗುತ್ತವೆ. ಮಕ್ಕಳನ್ನು ತರಗತಿ ಕೊಠಡಿಗಳಲ್ಲಿ ಕೂರಿಸುವ ಮೊದಲು ಕೊಠಡಿಗಳು ಸುಸ್ಥಿತಿಯಲ್ಲಿವೆಯೇ ಎಂದು ಖಾತರಿ ಪಡಿಸಿಕೊಳ್ಳಲು ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರಿಗೆ ಸೂಚಿಸಿದ್ದಾರೆ.
ಅಪಾಯ ಸ್ಥಿತಿಯಲ್ಲಿರುವ ಕೊಠಡಿಗಳನ್ನು ಬಳಸಿಕೊಳ್ಳಬಾರದು. ಅವುಗಳಿಗೆ ಬೀಗ ಹಾಕಿ ಮಕ್ಕಳು ಆ ಕಡೆಗೆ ಹೊಗದಂತೆ ನಿಗಾವಹಿಸುವುದು. ಕೊಠಡಿಗಳ ಕೊರತೆಯಾದಲ್ಲಿ ಗ್ರಾಮ ಪಂಚಾಯಿತಿ ಮತ್ತು ಎಸ್.ಡಿ.ಎಂ.ಸಿ ಯವರೊಂದಿಗೆ ಸಮಾಲೋಚನೆ ಮಾಡಿ ಸಮುದಾಯ ಭವನ ಅಥವಾ ಇತರೆ ಸುರಕ್ಷಿತ ಸ್ಥಳಗಳಲ್ಲಿ ತರಗತಿಗಳನ್ನು ನಡೆಸಲು ಕ್ರಮವಹಿಸುವುದು. ಈ ಬಗ್ಗೆ ಇಲಾಖೆಗೆ ಮಾಹಿತಿ ನೀಡಿ ನಂತರ ಪರ್ಯಾಯ ವ್ಯವಸ್ಥೆ ಮಾಡಲು ತಿಳಿಸಿದ್ದಾರೆ. ಇದಲ್ಲದೇ ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಿಗೆ ತಿಳಿಸಲು ಸಹ ಬಿಇಒ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
Read More
ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶಕ್ಕೆ ತೆರಳಿರುವುದು ಮೋಜು ಮಸ್ತಿಗಲ್ಲ, ರಾಜಕೀಯ ವಿರೋಧಿಗಳ ಆರೋಪದಲ್ಲಿ ಹುರುಳಿಲ್ಲ
ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನಲ್ಲಿ ದಾಖಲಾದ ಮಳೆ ವಿವರ ಹೀಗಿದೆ
ಚಕ್ರಾ, ಸಾವೇಹಕ್ಲು ಮುಳುಗಡೆ ಸಂತ್ರಸ್ಥರ ಖಾತೆ ಜಮೀನಿಗೆ ಬೇಲಿ, ಕ್ರಮಕ್ಕೆ ಆಗ್ರಹ