RIPPONPETE | ಇತಿಹಾಸ ಪ್ರಸಿದ್ದ ಕೆಂಚನಾಲ ಶ್ರೀಮಾರಿಕಾಂಬ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ಜುಲೈ 30ರ ಮಂಗಳವಾರ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಅಂದರೆ ಆರು ತಿಂಗಳಿ ಒಂದರಂತೆ ನಡೆಯುತ್ತದೆ. ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ ಆಚರಿಸಲಾಗುತ್ತಿರುವುದು ಇಲ್ಲಿನ ವಿಶೇಷ.
ಮಳೆಗಾಲದ ಜಾತ್ರೆಯಲ್ಲಿ ದೇವಿಗೆ ಭಕ್ತಿಯಿಂದ ಬಂದು ಹರಕೆ ಹೊತ್ತು ಹೋದರೆ ಬರುವ ಬೇಸಿಗೆ ಜಾತ್ರೆಯ ಒಳಗೆ ಈಡೇರುತ್ತದೆ. ಹಾಗಾಗಿ ಈ ಜಾತ್ರೆ ವಿಶೇಷವಿದ್ದು ಸುತ್ತಮುತ್ತಲಿನ ರೈತಾಪಿವರ್ಗ ಸೇರಿದಂತೆ ತಾಲ್ಲೂಕು, ಜಿಲ್ಲೆ, ಹೊರಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆಯಿಂದ ಭಕ್ತ ಸಮೂಹ ಬಂದು ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ತಮ್ಮ ಭಕ್ತಿಯನ್ನು ಸಮರ್ಪಿಸಿ ದೇವಿಯ ದರ್ಶನಾಶೀರ್ವಾದ ಪಡೆಯುತ್ತಾರೆ.
ಭಾರಿ ಗಾಳಿ, ಮಳೆಗೆ ನೆಲಸಮವಾದ ಮನೆ !
RIPPONPETE | ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಡಗೆರೆ ಶಾಲೆ ಸಮೀಪದ ಚೆಂದಾಳದಿಂಬದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಮನೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ.
ಭಾರಿ ಗಾಳಿ, ಮಳೆಯಿಂದಾಗಿ ಇಡೀ ಮನೆ ಕುಸಿದು ಬಿದ್ದಿದ್ದು ಮನೆಯಲ್ಲಿ ವಾಸಿಸುತ್ತಿದ್ದ ಅಮರ್‌ಸಿಂಗ್ ಕುಟುಂಬ ವರ್ಗದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು ವಾಸದ ಮನೆ ಸಂಪೂರ್ಣವಾಗಿ ನೆಲಸಮಗೊಂಡು ಅಪಾರ ನಷ್ಟ ಸಂಭವಿಸಿದೆ.
ಸುದ್ದಿ ತಿಳಿಯುತ್ತಿದ್ದಂತೆ ಬಾಳೂರು ಗ್ರಾಮ ಪಂಚಾಯ್ತಿ ಪಿಡಿಒ ಭರತ್, ಗ್ರಾಮ ಲೆಕ್ಕಾಧಿಕಾರಿ ಅಂಬಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದ ಪರಿಹಾರಕ್ಕೆ ಭರವಸೆ ನೀಡಿದ್ದಾರೆ.
ಗಣೇಶೋತ್ಸವ ಸಮಿತಿಗೆ ಆಯ್ಕೆ
RIPPONPETE | ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೋತ್ಸವ ಸಮಿತಿಯ ಅಧ್ಯಕ್ಷರಾಗಿ ರಾಮಚಂದ್ರ ಬಳೆಗಾರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ ಬಳ್ಳಾರಿ ಆಯ್ಕೆಯಾಗಿದ್ದಾರೆ.
ಕಳೆದ ಸಾಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ನಾಗರಾಜ ಪವಾರ್ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024ನೇ ಸಾಲಿನ ನೂತನ ಸಮಿತಿಗೆ ಎಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಯಿತು. ಉಳಿದಂತೆ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.