HOSANAGARA | ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಜು. 27 ಶನಿವಾರವೂ ಸಹ ತಾಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

ಹೊಸನಗರ ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಜು. 27 ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ.
ಇಂದು ಸಹ ತಾಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಮಳೆ ಮುಂದುವರೆದ ಹಿನ್ನೆಲೆಯಲ್ಲಿ ರಜೆ ವಿಸ್ತರಣೆ ಮಾಡಲಾಗಿದೆ.
Read more
ಅತಿವೃಷ್ಠಿಯಿಂದ ಹಾನಿ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಸರ್ಕಾರ ಬದ್ಧ ; ಕಲಗೋಡು ರತ್ನಾಕರ
ಚಂದ್ರಗುತ್ತಿ ದೇಗುಲ ಅಭಿವೃದ್ಧಿಗೆ ಶೀಘ್ರ ಕ್ರಮ ; ಡಿಸಿ ಗುರುದತ್ತ ಹೆಗಡೆ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.