SAGARA | ತಾಲೂಕಿನಾದ್ಯಂತ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜು.31 ಬುಧವಾರ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಆದೇಶಿಸಿದ್ದಾರೆ.
ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು ನಾಳೆಯೂ ಸಹ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ತಾಲ್ಲೂಕಿನಾದ್ಯಂತ ಎಲ್ಲಾ ಅಂಗನವಾಡಿಗಳು, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು. 31 ರಂದು ರಜೆ ಘೋಷಿಸಲಾಗಿದೆ. ಈ ದಿನದಂದು ನೀಡಿದ ರಜೆಯನ್ನು ಮುಂದಿನ ದಿನದಲ್ಲಿ ಹೊಂದಾಣಿಕೆ ಮಾಡಿ ಮಕ್ಕಳಿಗೆ ಪಾಠ ಪ್ರವಚನ ಮಾಡಲು ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ.

ಇನ್ನೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಾದ್ಯಂತ ಈಗಾಗಲೇ ಶಾಲೆ, ಕಾಲೇಜುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.
read more
School Holiday | ನಾಳೆಯೂ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.