MLA Belur Gopalakrishna visits flood affected areas
RIPPONPETE | ಬಾಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಇತ್ತೀಚಿನ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ನೊಂದ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ಧನ ನೀಡಿ, ನಂತರ ಅಧಿಕಾರಿಗಳಿಂದ ಮಾಹಿತಿ ಪಡೆದು ಮಳೆಯಿಂದ ಹಾನಿಗೊಳಗಾದ ಆಸ್ತಿ-ಪಾಸ್ತಿ ನಷ್ಟದ ಅಂದಾಜು ಪಟ್ಟಿ ಮಾಡಿ ತಕ್ಷಣವೇ ಪರಿಹಾರ ಒದಗಿಸಲು ಸಹಾಯವಾಗುವಂತೆ ಸರ್ಕಾರಕ್ಕೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಧರೆ ಕುಸಿತದಿಂದ ಸಂಪರ್ಕ ಕಡಿತಗೊಳ್ಳುವ ಆತಂಕ, ಘಟನಾ ಸ್ಥಳಕ್ಕೆ ಮಾಜಿ ಸಚಿವ ಕಿಮ್ಮನೆ ಭೇಟಿ, ಪರಿಶೀಲನೆ
ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಸನಗರ ತಾಲೂಕಿನಲ್ಲಿ ಅತಿವೃಷ್ಟಿಯಿಂದ 13.75 ಕೋಟಿ ರೂಪಾಯಿಗಳ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, 165 ಕಿಲೋ ಮೀಟರ್ ರಸ್ತೆ ಹಾಗೂ ಅಂಗನವಾಡಿ, ಶಾಲಾ ಕಟ್ಟಡಗಳು ಹಾಗೂ ಇತರೆ ಸರ್ಕಾರಿ ಖಾಸಗಿ ಸ್ವತ್ತುಗಳು ಸೇರಿ ಒಟ್ಟು 147 ಹಾನಿ ಪ್ರಕರಣಗಳು ಉಂಟಾಗಿದೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿರುವುದಾಗಿ ತಿಳಿಸಿದರು.
ಸಿದ್ದರಾಮಯ್ಯನವರ ನೇತೃತ್ವದಲ್ಲಿ ಈಗಿನ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿಯನ್ನು ಪೂರೈಸಲಿದ್ದು, ಮುಂದಿನ ಅವಧಿಯು ಕಾಂಗ್ರೆಸ್ ಸರ್ಕಾರವೇ ಅಧಿಕಾರ ನಡೆಸಲಿದೆ. ಸುಮ್ಮನೆ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಇಲ್ಲಸಲ್ಲದ ಆರೋಪ ಮಾಡುತ್ತಿವೆ. ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ, ಅವರ ಆರೋಪದಂತೆ ಸರ್ಕಾರ ಉನ್ನತ ಮಟ್ಟದ ತನಿಖೆಯನ್ನು ಸಹ ನಡೆಸುತ್ತಿದೆ ಎಂದರು.
ಅತಿವೃಷ್ಟಿ ಪ್ರದೇಶದ ಭೇಟಿ ಸಂದರ್ಭದಲ್ಲಿ ತಹಸೀಲ್ದಾರ್ ರಶ್ಮಿ ಹಾಲೇಶ್, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್, ಬಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ಆಚಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅನಿತಾ ಕುಮಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪ ಗೌಡ, ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಚೇತನ್ ಹೆಗಡೆ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪುಟ್ಟನಾಯ್ಕ್, ಕಾಂಗ್ರೆಸ್ ಘಟಕ ಅಧ್ಯಕ್ಷ ಗಣಪತಿ, ಸಣ್ಣಕ್ಕಿ ಮಂಜು, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.