HOSANAGARA | ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 7 ಮಿನಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವ ಧನದ ಆಧಾರ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ, ಅಲ್ಪ ಸಂಖ್ಯಾತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಆಸಕ್ತ ಸ್ಥಳೀಯರು ಇಲಾಖೆಯ ವೆಬ್ಸೈಟ್ https:/karnemakaone.kar.nic.in/abcd/ ಮೂಲಕ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹೊಸನಗರ ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
ಧರೆ ಕುಸಿತದಿಂದ ಸಂಪರ್ಕ ಕಡಿತಗೊಳ್ಳುವ ಆತಂಕ, ಘಟನಾ ಸ್ಥಳಕ್ಕೆ ಮಾಜಿ ಸಚಿವ ಕಿಮ್ಮನೆ ಭೇಟಿ, ಪರಿಶೀಲನೆ

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.