ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊಸನಗರದಲ್ಲಿ ಶಿಕ್ಷಕರ ಪ್ರತಿಭಟನೆ, ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ

Written by malnadtimes.com

Published on:

HOSANAGARA | 2017ರ ಹೊಸ ವೃಂದ ಮತ್ತು ನೇಮಕಾತಿಗಳನ್ನು 2016 ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವನ್ವಯಗೊಳಿಸಬಾರದು ಎಂದು ಹೊಸನಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮಹಮದ್ ಆಲ್ತಾಫ್‌ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್‌ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now

ನಾಯಿಗಳ ದಾಳಿಗೆ ಸಿಲುಕಿ ಗಾಯಗೊಂಡಿದ್ದ ಜಿಂಕೆ ರಕ್ಷಣೆ !

ಈ ಸಂದರ್ಭದಲ್ಲಿ ಮಾತನಾಡಿದ ಆಲ್ತಾಫ್, ರಾಜ್ಯದಲ್ಲಿ ಶಾಲಾ ಶಿಕ್ಷಣದಲ್ಲಿ ಅನೇಕ ಹೊಸ ಉಪಕ್ರಮಗಳು ತರುವುದರ ಮೂಲಕ ದೇಶದಲ್ಲಿ ಮಾದರಿಗಳನ್ನು ನಿರ್ಮಿಸಿದೆ. ಕಾಲ ಕಾಲಕ್ಕೆ ಆಗುವ ಶೈಕ್ಷಣಿಕ ಬದಲಾವಣೆಗಳನ್ನು ನಮ್ಮ ರಾಜ್ಯದಲ್ಲೂ ಶಾಲಾ ಶಿಕ್ಷಣ ಇಲಾಖೆ ಸಮರ್ಪಕವಾಗಿ ನಿರ್ವಹಿಸುತ್ತಾ ಬಂದಿರುವುದು ಶ್ಲಾಘನೀಯ. ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 1,88,532 ಶಿಕ್ಷಕರಲ್ಲಿ ಹಿರಿಯ ಮುಖ್ಯ ಶಿಕ್ಷಕರು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ವಿಶೇಷ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಾ 1 ರಿಂದ 7 ಮತ್ತು 1 ರಿಂದ 8ನೇ ತರಗತಿಗಳನ್ನು ಸಮರ್ಥವಾಗಿ ನಿರ್ವಾಹಣೆ ಮಾಡುತ್ತ ಬಂದಿದ್ದಾರೆ.

ಎನ್.ಸಿ.ಟಿ.ಇ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸುಗಳಿಗೆ ಅನುಕೂಲವಾಗುವಂತೆ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯ ಪದನಾಮವನ್ನು ಬದಲಾಯಿಸಿ, ಹೊಸ ವೃಂದ ಬಲವನ್ನು ನಿರ್ಧರಿಸುವ ಕುರಿತ ವಿಶೇಷ ರಾಜ್ಯ ಪತ್ರವನ್ನು 2017ರ ಮೇ20 ರಂದು ಹೊರಡಿಸಿದ ಪ್ರಾಥಮಿಕ ಶಾಲಾ ಶಿಕ್ಷಕ ವೃಂದವನ್ನು ಮುಖ್ಯವಾಗಿ ಪ್ರಾಥಮಿಕ ಶಾಲಾ ಶಿಕ್ಷಕರು 1 ರಿಂದ 5ಕ್ಕೆ 1,12,467 ಹಾಗೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು 6 ರಿಂದ 8ಕ್ಕೆ 51,781 ಎಂದು ವೃಂದವಾರು ಹುದ್ದೆಗಳನ್ನು ಮಂಜೂರಾತಿ ಮಾಡಿ ಆದೇಶಿಸಿದೆ. ಇದರಿಂದ 2016ಕ್ಕಿಂತ ಮೊದಲು 1 ರಿಂದ 7, 1ರಿಂದ 8 ವೃಂದಕ್ಕೆ ನೇಮಕಾತಿಯಾದ ಎಲ್ಲಾ ಸಹ ಶಿಕ್ಷಕರು ಪ್ರಾಥಮಿಕ ಶಾಲಾ ಶಿಕ್ಷಕರು 1ರಿಂದ 5 ಎಂದು ಪರಿಗಣಿಸಿದ್ದು, ಶಿಕ್ಷಕರಿಗೆ ತೀವ್ರ ಅನ್ಯಾಯವಾಗಿದೆ.

ಹೊಸ ವೃಂದಬಲ ನಿಗದಿಯಾಗುವವರೆಗೆ ಪ್ರಾಥಮಿಕ ಶಾಲಾ ಸಹ ಶಿಕ್ಷಕ ವೃಂದದಿಂದ ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್-2 ವೃಂದಕ್ಕೆ ನಿಯಮಿತವಾಗಿ ಬಡ್ತಿ ನೀಡುವಲ್ಲಿ ಯಾವುದೇ ಸಮಸ್ಯೆಗಳು ಇರಲಿಲ್ಲ. ಪ್ರಾಥಮಿಕ ಶಾಲೆಗಳಲ್ಲಿ 2017ರ ಹೊಸ ವೃಂದಬಲ ನಿಗದಿಯಿಂದಾಗಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ವೃಂದಕ್ಕೆ ಬಡ್ತಿ ನೀಡುವಾಗ ಗೊಂದಲಗಳು ಉಂಟಾದುದ್ದನ್ನು ನಮ್ಮ ಸಂಘಟನೆಯು ಬಲವಾಗಿ ಖಂಡಿಸುತ್ತಾ ಬಂದಿದ್ದರೂ, ಅದನ್ನು ಪರಿಹರಿಸದೇ ಮುಂದೂಡುತ್ತಾ ಬರಲಾಗಿದೆ.

ಕಳೆದ 7-8 ವರ್ಷಗಳಿಂದ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳಿಂದ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾನಿರತ ಪದವಿಧರ ಶಿಕ್ಷಕರಿಗೆ ಉಂಟಾಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲ್ಲೂಕು ವತಿಯಿಂದ 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗೆ ಅನ್ಯಾಯ ಸರಿಪಡಿಸುವ ಕುರಿತು ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡುವ ಕುರಿತು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016ರ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದಲ್ಲಿ ಮೇಲೆ ಬಡ್ತಿ ನೀಡುವ ಕುರಿತು ಹಲವಾರು ಬೇಡಿಕೆಗಳನ್ನು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಇಲ್ಲಿಯವರೆಗೆ ಸ್ಪಂದಿಸಿಲ್ಲ. ಆದ್ದರಿಂದ ಈ ಹೋರಾಟ ಅನಿವಾರ್ಯವಾಗಿದೆ. ಮೊದಲ ಹಂತದಲ್ಲಿ ತಾಲೂಕು ಕಛೇರಿಯ ಮುಂದೆ ಪ್ರತಿಭಟಿಸಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದೇವೆ. ಸರ್ಕಾರ ಇದಕ್ಕೆ ಬೆಂಬಲಿದಿದ್ದರೆ ರಾಜ್ಯಾಧ್ಯಂತ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ತಿಳಿಸಿದರು.

ಮಳೆ ಹಾನಿ ವರದಿ ನೀಡಲು ತಾತ್ಸಾರ ಬೇಡ ಅಧಿಕಾರಿಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ

ಈ ಮನವಿ ಪತ್ರ ನೀಡುವ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಆರ್ ಸುರೇಶ್, ಉಪಾಧ್ಯಕ್ಷೆ ಲಿಲ್ಲಿ ಡಿಸೋಜ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವಣ್ಯಪ್ಪ, ಪುಟ್ಟಸ್ವಾಮಿ, ಜಗದೀಶ್ ಕಾಗಿನೆಲೆ, ಶಿಕ್ಷಕರಾದ ಧರ್ಮಪ್ಪ, ಶಿವಪ್ಪ, ಶಿವಮೂರ್ತಿ, ವೆಂಕಟೇಶ್, ಈಶ್ವರ್ ಪಡೀಕರ್, ಗಂಗಾನಾಯ್ಕ್, ಸತ್ಯನಾರಾಯಣ, ಮಾಲತೇಶ್ ತಾಲ್ಲೂಕು ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರ ಪತ್ತಿನ ಸಹಕಾರಿ ಸಂಘದ ಪದಾಧಿಕಾರಿಗಳು ಸದಸ್ಯರು ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a Comment