ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ, ಪೊಲೀಸ್ ಸೇರಿ ಹಲವರಿಗೆ ಗಾಯ !

Written by Mahesha Hindlemane

Published on:

BHADRAVATHI ; ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪೊಲೀಸ್ ಸೇರಿದಂತೆ ಐವರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶನಿವಾರ ಸಂಜೆ ಗಣಪತಿ ಹಬ್ಬದ ವೇಳೆ ಡೊಳ್ಳು ಬಾರಿಸುವ ತಂಡವನ್ನು ಬುಕ್ ಮಾಡಿದ್ದ ಎರಡು ಯುವಕರ ಸಂಘಗಳ ಮಧ್ಯೆ ಗಲಾಟೆ ನಡೆದಿದೆ. ಒಂದೇ ಸಮಯಕ್ಕೆ ಗಣಪತಿ ಮೆರವಣಿಗೆ ಹಮ್ಮಿಕೊಂಡಿದ್ದು, ಡೊಳ್ಳು ಬಾರಿಸುವ ತಂಡ ಬರುವುದು ವಿಳಂಬವಾಗಿದ್ದರಿಂದ ಗಲಾಟೆ ನಡೆದಿದೆ.

ಕಲ್ಲು, ದೊಣ್ಣೆಗಳಿಂದ ಯುವಕರು ಹೊಡೆದಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಲಾಟೆ ತಡೆಯಲು ಯತ್ನಿಸಿದ್ದಾರೆ. ಕಲ್ಲು ತೂರಾಟದಲ್ಲಿ ಪೊಲೀಸ್ ಒಬ್ಬರು ಗಾಯಗೊಂಡಿದ್ದು, ನಾಲ್ವರು ಯುವಕರು ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

Leave a Comment