Thirthahalli ; ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಬೇಗುವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಬಿದರಹಳ್ಳಿ ಗ್ರಾಮದ ಇ.ಎಸ್. ಶ್ಯಾಮಣ್ಣ (66) ಮೃತ ದುರ್ದೈವಿ. ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಹೆಜ್ಜೆ ಹಾಕುವ ವೇಳೆ ತಲೆಸುತ್ತು ಬಂದು ಬಿದ್ದು ಅಸ್ಪಸ್ಥಗೊಂಡಿದ್ದರು. ಈ ವೇಳೆ ಸ್ಥಳದಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಡಿಜೆ ವಿಪರೀತ ಸದ್ದಿನಿಂದಾಗಿ ಮೃತಪಟ್ಟಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ಮೊಬೈಲ್ ಗಳು ಹಾನಿ :
ತೀರ್ಥಹಳ್ಳಿ ಪಟ್ಟಣದಲ್ಲಿ ಭಾನುವಾರ ನಡೆದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲೂ ಡಿಜೆ ಸೌಂಡ್ ಮತ್ತು ಲೇಸರ್ ಬಳಕೆ ಮಾಡಲಾಗಿದ್ದು ಪರಿಣಾಮವಾಗಿ ಡ್ರೋಣ್, ಡಿಎಸ್‌ಎಲ್‌ಆರ್ ಕ್ಯಾಮೆರಾ, 150ಕ್ಕೂ ಹೆಚ್ಚು ಮೊಬೈಲ್ ಕ್ಯಾಮೆರಾ ಲೆನ್ಸ್, ಡಿಸ್‌ಪ್ಲೇ, ಆಜಾದ್ ರಸ್ತೆಯ ಡಿವೈಡರ್ ಮೇಲಿನ ಮರದಲ್ಲಿ ವಾಸವಾಗಿದ್ದ ಗುಬ್ಬಚ್ಚಿ, ಸಣ್ಣ ಪಕ್ಷಿಗಳು ಹೃದಯಾಘಾತದಿಂದ ಮೃತಪಟ್ಟಿವೆ. ಕೆಲವು ಪಕ್ಷಿಗಳು ಹಾರಿ ಹೋಗಿವೆ. ಕೆಲ ಅಂಗಡಿಗಳಲ್ಲಿ ವಸ್ತುಗಳು ಅಲ್ಲಾಡಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.