SHIVAMOGGA ; ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ವಿದ್ಯಾರ್ಥಿ ಬಲಿಯಾಗಿದ್ದು, ವಾಕಿಂಗ್ ಮಾಡುವಾಗಲೇ ಹೃದಯಾಘಾತದಿಂದ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪೃಥ್ವಿರಾಜ್ (21) ಮೃತಪಟ್ಟಿದ್ದಾನೆ.
ಪೃಥ್ವಿರಾಜ್ ನಿನ್ನೆ ವಾಕಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು ಆದರೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ.
ವಿದ್ಯಾರ್ಥಿ ಪೃಥ್ವಿರಾಜ್ ನಿಧನಕ್ಕೆ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನಿಂದ ಸಂತಾಪ
SHIVAMOGGA ; ಶರಾವತಿ ನಗರದ ನಿವಾಸಿ, ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿ ಪೃಥ್ವಿರಾಜ್ (20) ಬುಧವಾರ ನಿಧನ ಹೊಂದಿದರು.
ಪ್ರವಾಸಿ ಮಂದಿರದ ಬಳಿ ಸಂಜೆ ವೇಳೆ ವಾಕಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ಗಮನಿಸಿದ ಮೋಹನ್ ಎಂಬುವವರು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಿ ಪೃಥ್ವಿರಾಜ್ ನಿಧನರಾಗಿದ್ದಾರೆ.
ಪೃಥ್ವಿರಾಜ್ ಸಿಮ್ಸ್ ಕಾಲೇಜಿನಲ್ಲಿ ಎರಡನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದರು. ಪ್ರತಿ ದಿನ ಪ್ರವಾಸಿ ಮಂದಿರದ ಬಳಿ ವಾಕ್ ಮಾಡುತ್ತಿದ್ದರು. ಇವರು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸದಸ್ಯ, ಕಾಮಧೇನು ಔಷಧ ಸಗಟು ವ್ಯಾಪಾರಿ ಮುತ್ತಣ್ಣ ಅವರ ಪುತ್ರ. ಪೃಥ್ವಿರಾಜ್ ಅವರ ಸಹೋದರ ಪಾರ್ಥ ದೆಹಲಿಯಲ್ಲಿದ್ದಾರೆ.
ಪೃಥ್ವಿರಾಜ್ ಅವರ ನಿಧನಕ್ಕೆ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂತಾಪ ಸೂಚಿಸಿದೆ. ಮೃತರ ತಂದೆ ಮುತ್ತಣ್ಣ ಅವರು ಔಷಧಿ ವ್ಯಾಪಾರಿಗಳ ಸಂಘದ ಸದಸ್ಯ, ರೋಟರಿ ಸೆಂಟ್ರಲ್ ಕ್ಲಬ್ ಸದಸ್ಯರಾಗಿ ಹಲವಾರು ಸಂಘಟನೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಮೂಲತಃ ನ್ಯಾಮತಿಯವರಾಗಿದ್ದು, ಶಿವಮೊಗ್ಗದ ಶರಾವತಿ ನಗರದ ಎಂಟನೇ ಕ್ರಾಸ್‌ನಲ್ಲಿ ವಾಸ ಮಾಡುತ್ತಿದ್ದಾರೆ.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್, ಕಾರ್ಯದರ್ಶಿ ಈಶ್ವರ್, ರೋಟರಿ ವಲಯ 11ರ ಸಹಾಯಕ ಗವರ್ನರ್ ಸುರೇಶ್, ರೋಟರಿ ವಿಜಯಕುಮಾರ್, ಜಿಲ್ಲಾ ಗವರ್ನರ್ ದೇವಾನಂದ್, ಪ್ರಕಾಶ್, ರವಿ ಕೋಟೋಜಿ, ಚುಡಾಮಣಿ ಪವಾರ್, ಬಸವರಾಜ್, ಜಯಶೀಲ ಶೆಟ್ಟಿ, ಸಂತೋಷ್, ಗಣೇಶ್ ಎಂ.ಅಂಗಡಿ, ರಮೇಶ್, ಗೀತಾ ಜಗದೀಶ್ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸದಸ್ಯರು ಸಂತಾಪ ಸೂಚಿಸಿದ್ದಾರೆ.