HOSANAGARA ; ಬೆಂಗಳೂರಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಜೆ. ಸುಮನ್ ಅವರು ಅಂತಿಮ ವರ್ಷದ 06 ಪರೀಕ್ಷೆಗಳಲ್ಲಿ ಆರರಲ್ಲೂ ಉತ್ತಮ ಫಲಿತಾಂಶ ದಾಖಲಿಸಿ ಚಿನ್ನದ ಪದಕ ಗಳಿಸುವ ಮೂಲಕ ಕಾಲೇಜಿಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಇನ್ನೂ ಫ್ರಾನ್ಸ್ ಅಕಾಡೆಮಿಯಿಂದ ಅತ್ಯುತ್ತಮ ದಂತ ವಿದ್ಯಾರ್ಥಿ ಎಂದು ಪೆರ್ರಿ ಪೀಚರ್ಡ್ ಎಂಬ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಇವರು ತಾಲ್ಲೂಕಿನ ಕಾರಣಗಿರಿ ವರ್ತಕ ಜಯರಾಮ್ ಮತ್ತು ರತ್ನ ದಂಪತಿಗಳ ಪುತ್ರರಾಗಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.