ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ | ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿ ; ಡಾ.ಧನಂಜಯ ಸರ್ಜಿ

Written by malnadtimes.com

Published on:

SHIVAMOGGA ; ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಯಾಗುತ್ತದೆ. ಆದ್ದರಿಂದ ಯುವಜನತೆ ಸೇರಿತೆ ನಾವೆಲ್ಲ ಕ್ರೀಡೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು
ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಕರೆ ನೀಡಿದರು.

WhatsApp Group Join Now
Telegram Group Join Now
Instagram Group Join Now

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಸೆ.29 ರಂದು ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 2024-25 ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಯಾಗುವುದಲ್ಲದೆ, ಪರಿಪೂರ್ಣ ವಿದ್ಯೆಯ ಹೊರತಾಗಿ ಅತ್ಯುನ್ನತ ಸಾಧನೆಗೊಂದು ಅವಕಾಶ ಲಭ್ಯವಿದೆ. ಹಾಗಾಗಿ ಯುವ ಜನತೆ ದೈನಂದಿನ ಜೀವನದ ಶೈಲಿಯಲ್ಲಿ ಕ್ರೀಡೆ ಅಳವಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.

ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಈ ವಿಭಾಗದಲ್ಲಿ ಬಾಡ್ಮಿಂಟನ್, ಈಜು, ಟೆನ್ನಿಸ್, ಹಾಕಿ, ಜುಡೋ ಮತ್ತು ಯೋಗ ಸ್ಪರ್ಧೆಗಳನ್ನು ನಗರದ ಒಳಾಂಗಣ ಕ್ರೀಡಾಂಗಣ, ಕ್ರೀಡಾ ಸಂಕೀರ್ಣ ಮತ್ತು ವಾಜಪೇಯಿ ಬಡಾವಣೆಯಲ್ಲಿ ಆಯೋಜಿಸಲಾಗಿತ್ತು.

ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿತ್ರದುರ್ಗ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಯ ಸುಮಾರು 600 ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಯವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಹಿರಿಯ ಯೋಗ ತರಬೇತುದಾರಾದ ವನಶ್ರೀ, ಮಂಜಪ್ಪ, ಕ್ರೀಡಾಪಟುಗಳು, ಕ್ರೀಡಾಸಕ್ತರು ಹಾಜರಿದ್ದರು.

Leave a Comment