SAGARA ; ರೈಲ್ವೆ ಹಳಿ ಮೇಲೆ ಯುವಕನೋರ್ವನ ಶವ ಪತ್ತೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ರೈಲ್ವೆ ಗೇಟ್ ಬಳಿ ನಡೆದಿದೆ.
ಅಂದಾಸುರ ರೈಲ್ವೆ ಗೇಟ್ ಸಮೀಪದಲ್ಲಿರುವ ದೇವಸ್ಥಾನವೊಂದರ ಮುಂಭಾಗದಲ್ಲಿ ಮೃತದೇಹ ಪತ್ತೆಯಾಗಿದ್ದು, ಮೃತನನ್ನು ದಾವಣಗೆರೆ ಮೂಲದ ಬಸವರಾಜ್ ಎಂದು ಗುರುತಿಸಲಾಗಿದೆ. ಈತ ರಿಪ್ಪನ್‌ಪೇಟೆ ಸಮೀಪದ ಕೋಡೂರಿನಲ್ಲಿ ಕಳೆದೆರಡು ವರ್ಷಗಳಿಂದ ಜೆಸಿಬಿ ಆಪರೇಟರ್ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ರೈಲು ಹಳಿಯ ಮೇಲೆ ಮೃತದೇಹ ಪತ್ತೆಯಾಗಿದ್ದು ಮುಖದ ಭಾಗದಲ್ಲಿ ಗಾಯವಾಗಿದೆ. ಮೃತ ವ್ಯಕ್ತಿಗೆ ಸಂಬಂಧಿಸಿದ ಬೈಕ್ ಹಾಗೂ ವಸ್ತುಗಳು ರೈಲು ಹಳಿಯ ಪಕ್ಕದಲ್ಲಿರಿಸಲಾಗಿದ್ದು ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಪೊಲೀಸ್ ತನಿಖೆಯಿಂದ ಈ ಪ್ರಕರಣದ ಸತ್ಯಾಂಶ ಹೊರಬರಬೇಕಾಗಿದೆ.
ರೈಲು ಗುದ್ದಿ ಮೃತಪಟ್ಟಿದ್ದಲ್ಲಿ ಮೃತದೇಹ ಚೆಲ್ಲಾಪಿಲ್ಲಿಯಾಗಿ ಬೇರೆ ಕಡೆ ಬೀಳಬೇಕಾಗಿತ್ತು, ಒಂದು ವೇಳೆ ರೈಲು ಹರಿದು ಸಾವನ್ನಪ್ಪಿದ್ದರೆ ಮೃತದೇಹ ತುಂಡಾಗುತಿತ್ತು ಹಾಗಾಗಿ ಎಲ್ಲೋ ಕೊಲೆ ಮಾಡಿ ಇಲ್ಲಿ ತಂದು ಬಿಸಾಕಿದ್ದಾರೆ ಎಂದು ಸಾರ್ವಜನಿಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.