HOSANAGARA ; ಹೊಸನಗರದಲ್ಲಿ ಪ್ರತಿವರ್ಷ ಅದ್ದೂರಿ ದಸರಾ ಸಮಾರಂಭವನ್ನು ಮೈಸೂರು ದಸರಾ ಉತ್ಸವದಂತೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದ್ದು ಈ ವರ್ಷ ದಸರಾ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳೂರು ಸೊಸೈಟಿಯ ಅಧ್ಯಕ್ಷ ಹಾಗೂ ತುಂಗಾ ಅಡಿಕೆ ಮಂಡಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಉತ್ತಮ ಬಜೆಟ್ ನೀಡಿರುವ ವಿನಯ್‌ಕುಮಾರ್ ದುಮ್ಮರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಕಾರ್ಯರ್ಶಿಯಾಗಿ ಪಟ್ಟಣ ಪಂಚಾಯತಿ ಸದಸ್ಯ ಅಶ್ವಿನಿಕುಮಾರ್‌ರನ್ನು ನಿರ್ವಹಿಸಲಿದ್ದು ಉಳಿದಂತೆ ನಾಡಹಬ್ಬಗಳ ಸಮಿತಿಯ ಅಧ್ಯಕ್ಷರಾದ ತಹಶೀಲ್ದಾರ್ ರಶ್ಮಿ ಹಾಲೇಶ್ ಸದಸ್ಯರಾದ ಶ್ರೀನಿವಾಸ್ ಕಾಮತ್, ಎನ್. ಶ್ರೀಧರ ಉಡುಪ, ಅಂಜನ್ ಟೆಕ್ಸ್ ಟೈಲ್ಸ್ ರಾಜಮೂರ್ತಿ ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೆಟ್ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷ ಸದಸ್ಯರುಗಳು ಹಾಗೂ ಸರ್ಕಾರಿ ಎಲ್ಲ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಮುಂದುವರಿಕೆ, ಸಾರ್ವಜನಿಕರು ಸಹಕರಿಸಲು ಮನವಿ
HOSANAGARA ; ಕೆಲವು ದಿನಗಳಿಂದ ನಡೆಯುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಮುಂದುವರೆದಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಗ್ರಾಮ ಆಡಳಿತಾಧಿಕಾರಿಗಳ ತಾಲ್ಲೂಕು ಸಂಘದ ಅಧ್ಯಕ್ಷ ನವೀನ್ ಕುಮಾರ್ ಹಾಗೂ ಕಸಬಾ ಹೋಬಳಿ ಗ್ರಾಮ ಆಡಳಿತಾಧಿಕಾರಿ ಕೌಶಿಕ್ ಮನವಿ ಮಾಡಿದ್ದಾರೆ.
ನಾವು ಕೆಲವು ದಿನಗಳಿಂದ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದು ಇದರ ಜೊತೆಗೆ ಕೆಲಸಕ್ಕೆ ಹಾಜರಾಗದೇ ಮುಷ್ಕರ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಅದು ಅಲ್ಲದೇ ಸೆಪ್ಟೆಂಬರ್ 30ರಂದು ನಮ್ಮ ರಾಜ್ಯ ಸಂಘದ ಪದಾದಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷಗಳು ಕಂದಾಯ ಸಚಿವ ಕೃಷ್ಣಬೈರೇಗೌಡರೊಂದಿಗೆ ನಡೆದ ಸಭೆ ವಿಫಲವಾಗಿದ್ದು ಈಗಾಗಲೇ ನಿರ್ಣಯಿಸಿದಂತೆ ನಮ್ಮ ಮೂಲಭೂತ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆವಿಗೂ 30 ದಿನಗಳ ಪರಿವರ್ತಿತ ರಜೆ ಹಾಕಿ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿ ಕಛೇರಿಗೆ ಹೋಗದಂತೆ ಮುಷ್ಕರವನ್ನು ಮುಂದುವರೆಸಿರುವುದಾಗಿ ಈ ಮೂಲಕ ತಿಳಿಸಿದ್ದಾರೆ.