SHIVAMOGGA ; ಹಿರಿಯ ಇತಿಹಾಸ ವಿದ್ವಾಂಸ ಡಾ. ಎಚ್.ಎಸ್.ಗೋಪಾಲ್ ರಾವ್ (79) ಅವರು ಅಲ್ಪಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅರಿಶಿಣಕುಂಟೆ ನಿವಾಸಿಯಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಕೊನೆಯುಸಿರೆಳೆದಿದರು.
ಗೋಪಾಲ್ ರಾವ್ ಅವರು ಪತ್ನಿ, ಇಬ್ಬರು ಪುತ್ರರು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ಗೈಯಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ರಾವ್ ಅವರ ನಿಕಟವರ್ತಿ ಡಾ.ಬಾಲಕೃಷ್ಣ ಹೆಗಡೆ ಸಂತಾಪ ಸೂಚಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.