RIPPONPETE ; ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ಮೊಕದ್ದಮೆಯೊಂದರ ಹಿನ್ನಲೆಯಲ್ಲಿ ಲೋಕಯುಕ್ತ ಎಡಿಜಿಪಿ ಚಂದ್ರಶೇಖರ್ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೀಳು ಭಾಷೆಯಲ್ಲಿ ಮಾತನಾಡಿದ್ದು ಇದನ್ನು ಜಾತ್ಯಾತೀತ ಜನತಾದಳದ ವತಿಯಿಂದ ಖಂಡಿಸಿ, ಈ ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸುವಂತೆ ಜಾತ್ಯಾತೀತ ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್, ಜಿಲ್ಲಾ ಉಪಾಧ್ಯಕ್ಷ ಜಿ.ಎಸ್. ವರದರಾಜ್, ಹೊಸನಗರ ತಾಲ್ಲೂಕು ಅಧ್ಯಕ್ಷ ಎನ್. ವರ್ತೇಶ್ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರುಗಳು, ಈ ಅಧಿಕಾರಿಯು ಈ ಹಿಂದೆ ಕೆಲಸ ನಿರ್ವಹಿಸಿದ ಎಲ್ಲಾ ಸ್ಥಳಗಳಲ್ಲಿ ಹಾಗೂ ವಿವಿಧ ಹುದ್ದೆಗಳಲ್ಲಿ ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳಿಗೆ ಇರಬೇಕಾದ ಘನತೆ, ಗೌರವಗಳಿಗೆ ವಿರುದ್ಧವಾಗಿ ವರ್ತಿಸಿದ್ದ ಅನೇಕ ಉದಾಹರಣೆಗಳಿವೆ. ಆದ್ದರಿಂದ ರಾಜ್ಯಪಾಲರು ಈ ಅಧಿಕಾರಿಯ ಸೇವಾ ವಿವರಗಳನ್ನು ತರಿಸಿಕೊಂಡು ಕಳಂಕ ಹೊತ್ತ ಅಧಿಕಾರಿಯನ್ನು ಸೇವೆಯಿಂದ ವಜಾ ಮಾಡುವಂತೆ ಹಾಗೂ ಇವರ ವಿರುದ್ಧ ಇರುವ ಎಲ್ಲಾ ಆರೋಪಗಳ ತನಿಖೆ ಮಾಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್, ಜಿಲ್ಲಾ ಜಿ.ಡಿಎಸ್ ಉಪಾಧ್ಯಕ್ಷ ಜಿ.ಎಸ್. ವರದರಾಜ್ ಆಗ್ರಹಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.