RIPPONPETE ; ಗಾಂಧಿವಾದಿ, ಹಿರಿಯ ವೀರಶೈವ ಸಮಾಜದ ಮುಖಂಡ ನಿವೃತ್ತ ಶಾನುಭೋಗ ಶೇಣಿಗೆ ಎಸ್.ರುದ್ರಪ್ಪಗೌಡ (98) ಮಂಗಳವಾರ ರಾತ್ರಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು.
ಮೃತರಿಗೆ ಪತ್ನಿ, ಐವರು ಪುತ್ರರು, ಓರ್ವ ಪುತ್ರಿಯರನ್ನು ಅಗಲಿದ್ದಾರೆ. ಮೃತರ ಆಂತ್ಯಕ್ರಿಯೆಯು ಸಮೀಪದ ಚಿಕ್ಕಜೇನಿ ಗ್ರಾಮದ ತಮ್ಮ ಜಮೀನಿನಲ್ಲಿ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ನೆರವೇರಿತು ಎಂದು ಕುಟುಂಬವರು ತಿಳಿಸಿದರು.
ಸಂತಾಪ :
ಹಿರಿಯ ಚೇತನ ನಿವೃತ್ತ ಶಾನುಭೋಗ ಎಸ್.ರುದ್ರಪ್ಪಗೌಡ ನಿಧನಕ್ಕೆ ಆನಂದಪುರ ಮುರುಘಾಮಠದ ಡಾ.ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಶಾಸಕ ಹರತಾಳು ಹಾಲಪ್ಪ, ಬಿ.ಸ್ವಾಮಿರಾವ್, ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಸಂತಾಪ ವ್ಯಕ್ತಪಡಿಸಿ ಮೃತರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.