HOSANAGARA ; ಇಲ್ಲಿನ ಶಾಸಕರ ಮಾದರಿ ಸರ್ಕಾರಿ ಬಾಲಕಿಯರ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿನಿಯರು ವಾಲಿಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಭಾಗ ಮಟ್ಟದ ಪಂದ್ಯಾವಳಿಯು ಮಧುಗಿರಿಯಲ್ಲಿ ನಡೆಯಲಿದೆ.
ಅಭಿನಂದನೆ :
ಸರ್ಕಾರಿ ಶಾಸಕರ ಮಾದರಿ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತೋಷದಾಯಕ ವಿಷಯವಾಗಿದೆ. ಇವರು ವಿಭಾಗ ಮಟ್ಟದಿಂದ ರಾಜ್ಯ ಮಟ್ಟಕ್ಕೂ ಆಯ್ಕೆಯಾಗಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ, ಎಸ್‌ಡಿಎಂಸಿ ಅಧ್ಯಕ್ಷ ನೆರಲೆ ರಮೇಶ್, ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ವಾಸಂತಿ ರಾಜೇಂದ್ರ ಕೊತ್ವಾಲ್, ಮುಖ್ಯ ಶಿಕ್ಷಕ ಹರೀಶ್, ದೈಹಿಕ ಶಿಕ್ಷಕ ರಾಜುಶೆಟ್ಟಿ, ಉಪಾಧ್ಯಕ್ಷೆ ರೋಹಿಣಿ ಸ್ವರೂಪ್, ಗೌತಮ್ ಕುಮಾರಸ್ವಾಮಿ, ಪ್ರದೀಪ, ಪ್ರವೀಣ್, ಶೈಲಜಾ, ಲಕ್ಷ್ಮಿ, ಕವಿತ, ಜಯಲಕ್ಷ್ಮಿ, ರಾಘವೇಂದ್ರ, ಪವಿತ್ರಾ, ನೇತ್ರಾ, ಚಂದ್ರಶೇಖರ, ನಾಸೀರ್ ವಿಜಯಗೌಡ ಲತ ನಾಯ್ಕ್ ಈ ಶಾಲೆಯ ಎಲ್ಲ ಶಿಕ್ಷಕ ವೃಂದ ಹಾಗೂ ಎಸ್‌ಡಿಎಂಸಿ ಸದಸ್ಯರು ಹಾರೈಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.