HOSANAGARA ; ಸೋಮವಾರ ರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಹೊಸನಗರದ ಕೋರ್ಟ್ ಸರ್ಕಲ್ ಬಳಿ ವಿದ್ಯುತ್ ಕಂಬಕ್ಕೆ ಗೂಡ್ಸ್ ವಾಹವೊಂದು ಡಿಕ್ಕಿ ಹೊಡೆದ ಪರಿಣಾಮ ಎರಡು ವಿದ್ಯುತ್ ಕಂಬಗಳು ತುಂಡಾದ ಘಟನೆ ನಡೆದಿದೆ.
ನಗರ ಕಡೆಯಿಂದ ನ್ಯಾಮತಿಗೆ ಹೋಗುತ್ತಿದ್ದ ಕೆಎ17ಎಎ9542 ಸಂಖ್ಯೆಯ ವಾಹನವನ್ನು ಫಾರನ್ ಎಂಬುವವರು ಚಲಾಯಿಸುತ್ತಿದ್ದು ತಡರಾತ್ರಿ 02 ಗಂಟೆ ಸುಮಾರಿಗೆ ಸಂದರ್ಭದಲ್ಲಿ ಕೋರ್ಟ್ ಸರ್ಕಲ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 11 KV ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡು ವಿದ್ಯುತ್ ಕಂಬಗಳು ತುಂಡಾಗಿದ್ದು ವಾಹನದ ಮುಂಭಾಗ ಸಹ ಜಖಂಡೊಂಡಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

15 ಸಾವಿರ ರೂ. ದಂಡ :
ಎರಡು ವಿದ್ಯುತ್ ಕಂಬ ಜಖಂಗೊಂಡ ಪರಿಣಾಮ ಹೊಸನಗರ ಮೆಸ್ಕಾಂ ಇಲಾಖೆಗೆ ಸುಮಾರು 15 ಸಾವಿರ ರೂ. ದಂಡ ಕಟ್ಟಿ ವಾಹನವನ್ನು ನ್ಯಾಮತಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದ್ದು ಯಾವುದೇ ದೂರುಗಳು ದಾಖಲಾಗಿಲ್ಲ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.