RIPPONPETE : 4ನೇ ವರ್ಷದ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್‌ರಾಜ್ ಅಭಿಮಾನಿ ಬಳಗದ 69ನೇ ರಾಜ್ಯೋತ್ಸವ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಭರದ ಸಿದ್ದತೆಯಲ್ಲಿ ತೊಡಗಿರುವುದಾಗಿ ಕಸ್ತೂರಿ ಕನ್ನಡ ಸಂಘದ ಸಂಸ್ಥಾಪಕ ಅಧ್ಯಕ್ಷ ಆರ್.ಎ.ಚಾಬುಸಾಬ್ ಮತ್ತು ರಾಜ್ಯೋತ್ಸವ ಸಮಿತಿಯ ಅಧ್ಯಕ್ಷೆ ಧನಲಕ್ಷ್ಮಿ ಜಂಟಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಕುವೆಂಪು ಸಭಾಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 29 ರಂದು ಮಹಿಳೆಯರಿಗಾಗಿ `ಚುಕ್ಕಿರಂಗೋಲಿ ಬಣ್ಣ ತುಂಬುವ ಸ್ಪರ್ಧೆ, ಆರತಿ ತಟ್ಟೆ ಅಲಂಕಾರ ಸ್ಪರ್ಧೆ, ಥ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾವಳಿ, ಸಂಗೀತ ಕುರ್ಚಿ ಸ್ಪರ್ಧೆ ಮತ್ತು ಒಂದು ನಿಮಿಷದ ವಿಶೇಷ ಸ್ಪರ್ಧೆ ಹಾಗೂ ಪುರುಷರಿಗಾಗಿ ವಾಲಿಬಾಲ್ ಪಂದ್ಯಾವಳಿ ಹಾಗೂ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದಂದು ತಾಯಿ ಭುವನೇಶ್ವರಿ ತಾಯಿ ಮೆರವಣಿಗೆ ಸ್ಥಳೀಯ ಜಾನಪದ ಕಲಾತಂಡಗಳ ಮೆರಗಿನೊಂದಿಗೆ ಶಾಲಾ ಮಕ್ಕಳ ಮೆರವಣಿಗೆ ನಡೆಯಲಿದೆ.

ಜೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಕು|| ದಿಯಾ ಹೆಗಡೆ, ಎದೆ ತುಂಬಿ ಹಾಡುವೆನು ಖ್ಯಾತಿಯ ಸಾನ್ವಿ ಜಿ.ಭಟ್, ಜಾನಪದ ಕಲಾವಿದರಾದ ಮೆಹಬೂಬ್‌ಸಾಬ್, ಜೋಗಿ ಪದದ ಗಾಯಕ ನಾಗರಾಜ ತೊಂಬ್ರಿ ಇವರ ರಸಮಂಜರಿ ಕಾರ್ಯಕ್ರಮದೊಂದಿಗೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದರೊಂದಿಗೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಶೇಕಡಾ 90ಕ್ಕೂ ಹೆಚ್ಚು ಅಂಕ ಗಳಿಸಿ ಉತ್ತೀರ್ಣಾರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಕನ್ನಡ ಭಾಷೆಯಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.
ಪ್ರತಿಕಾಗೋಷ್ಟಿಯಲ್ಲಿ ಕಸ್ತೂರಿ ಕನ್ನಡ ಸಂಘದ ಪದಾಧಿಕಾರಿಗಳಾದ ಮಹಮ್ಮದ್‌ಹುಸೇನ್ ಜಿ.ಎಸ್.ವರದರಾಜ್, ಮೆಣಸೆ ಆನಂದ, ತರಕಾರಿ ಯೋಗೇಂದ್ರಗೌಡ, ಶ್ವೇತಾ, ಆರ್.ಡಿ.ಶೀಲಾ, ಶ್ರೀಧರ, ಗಣಪತಿ ಗವಟೂರು, ಹೆಚ್.ಎನ್.ಉಮೇಶ, ರಮೇಶ ಫ್ಯಾನ್ಸಿ, ಹೇಮಾ ಮಂಜಪ್ಪ, ಸೀಮಾ, ನಿರ್ಮಲ, ಇನ್ನಿತರರು ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.