HOSANAGARA ; ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸೇಂಟ್ ಚಾರ್ಲ್ಸ್ ನ್ಯೂ ಟೌನ್ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ 17 ವರ್ಷದೊಳಗಿನ ಕ್ರೀಡಾಕೂಟದಲ್ಲಿ ಹೊಸನಗರದ ಮಲೆನಾಡು ಪ್ರೌಢಶಾಲೆ ಬಾಲಕಿಯರು ಥ್ರೋಬಾಲ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟದ ಪ್ರಶಸ್ತಿಯ ಗರಿಯನ್ನು ತಮ್ಮದಾಗಿಸಿಕೊಂಡರು.

ಈ ತಂಡದಲ್ಲಿ ನಾಯಕಿ ಶರಣ್ಯ, ಭೂವಿತಾ, ಸಿಮ್ರಾನ್, ಮೇಘನಾ, ಸಿಂಚನಾ, ಚಿತ್ರ, ಅಮೂಲ್ಯ, ಭವ್ಯ, ಅನುಷಾ ಹಾಗೂ ಇಂಚರ ಭಾಗವಹಿಸಲಿದ್ದಾರೆ.
ಶಾಲೆಯ ದೈಹಿಕ ಶಿಕ್ಷಕ ಎಸ್ ಎಲ್ ಸುರೇಶ್, ತಂಡದ ಮ್ಯಾನೇಜರ್ ಹಾಲಮ್ಮ ಹಾಗೂ ಶಿವರಾಜ್ ಕುಮಾರ್, ಜ್ಯೋತಿ ಮತ್ತು ತರಬೇತುದಾರರಾದ ಮಹೇಶ, ಶರತ್, ಭರತ್ ಇಂದು ಮಲೆನಾಡು ಪ್ರೌಢಶಾಲೆಯಲ್ಲಿ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಈ ತಂಡ ಅ. 24ರಂದು ಬೆಂಗಳೂರು ಜಿಲ್ಲೆ ಕನಕಪುರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ತಮ್ಮ ಕ್ರೀಡಾಕೌಶಲ್ಯವನ್ನು ಪ್ರದರ್ಶಿಸಲಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರು, ಶಾಲಾ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.