ಹೊಸನಗರ ತಾಲ್ಲೂಕಿನ ಸಿ ಪ್ರವರ್ಗದ ಮುಜರಾಯಿ ದೇವಸ್ಥಾನಗಳ ಸಮಿತಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

Written by malnadtimes.com

Published on:

HOSANAGARA ; ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಧರ್ಮದಾಯಿ ದತ್ತಿಗಳ ಕಾಯ್ದೆ ಅಧಿನಿಯಮ ಮತ್ತು 1997ರ ಕಲಂ 25ರ ಅನ್ವಯ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಿ ಪ್ರವರ್ಗ ಮುಜರಾಯಿ ದೇವಸ್ಥಾನಗಳ ಅರ್ಹ ಸದಸ್ಯರುಗಳಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಧಾರ್ಮಿಕ ಮುಜರಾಯಿ ಇಲಾಖೆಯ ತಾಲ್ಲೂಕು ಶಿರಾಸ್ಥೆದಾರ್ ಸುಧೀಂದ್ರಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಧಾರ್ಮಿಕ ದೇವಸ್ಥಾನಗಳ ಸಿ ಪ್ರವರ್ಗದ  ಅರ್ಹತೆಗಳನುನಾಸರವಾಗಿ ವ್ಯವಸ್ಥಾಪನ ಸಮಿತಿಯನ್ನು ರಚಿಸಲಾಗುತ್ತಿದ್ದು ಈ ಸಮಿತಿ ಮುಂದಿನ 3 ವರ್ಷಗಳ ಅವಧಿಗೆ ರಚಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಯಾವುದೆ ಒಂದು ಅಧಿಸೂಚತ ಸಮಸ್ತೆಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ ಅರ್ಜಿಯನ್ನು ನಿಗದಿತ ನಮೂನೆ-1(ಬಿ) (22ನೇ ನಿಯಮ)ದಲ್ಲಿ ಭರ್ತಿ ಮಾಡಿ ಅಕ್ಟೋಬರ್ 20ರಿಂದ ನವೆಂಬರ್ 19ರೊಳಗೆ ತಹಶೀಲ್ದಾರ್ ಕಛೇರಿಗೆ ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿಗಳು ತಾಲ್ಲೂಕು ಕಛೇರಿಯಲ್ಲಿ ಸಿಗಲಿದೆ‌.

ಅರ್ಜಿ ಸಲ್ಲಿಸ ಬಯಸುವ ಆಸಕ್ತರಿಗೆ ಅರ್ಹತೆಗಳು :

  • ಕನಿಷ್ಠ 25 ವರ್ಷ ವಯಸ್ಸಾಗಿರಬೇಕು.
  • ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವ ಮಾತ್ರ ಪಡೆಯಬಹುದಾಗಿದೆ.
  • ದೇವರಲ್ಲಿ ನಂಬಿಕೆಯುಳ್ಳವರಾಗಿದ್ದು, ಒಳ್ಳೆಯ ವರ್ತನೆ ಹಾಗೂ ಹೆಸರು ಹೊಂದಿದ್ದ ಹಾಗೂ ದೇವಾಲಯ/ಸಂಸ್ಥೆಯು ಇರುವ ಪ್ರದೇಶದಲ್ಲಿ ಗೌರವಕ್ಕೆ ಪಾತ್ರರಾಗಿರಬೇಕು.

ಅನರ್ಹತೆಗಳು :

  • ಒಂದು ಸಕ್ಷಮ ನ್ಯಾಯಾಲಯದಿಂದ ಅವಿಮುಕ್ತ ದಿವಾಳಿಯೆಂದು ಘೋಷಿತನಾಗಿರಬಾರದು.
  • ಅಸ್ವಸ್ಥಚಿತ್ತನಾಗಿದ್ದು ಮತ್ತು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲಾಗಿದ್ದರೆ ಅಥವಾ ಕಿವುಡು ಅಥವಾ ಮೂಕ ಅಥವಾ ಕುಷ್ಠ ಅಥವಾ ಇತರೆ ಯಾವುದೇ ಭಯಂಕರ ಅಥವಾ ಸಾಂಕ್ರಾಮಿಕ ಕಾಯಿಲೆಯಿಂದ ಪೀಡಿತನಾಗಿರಬಾರದು.
  • ದೇವಾಲಯದ ಯಾವುದೇ ಸ್ವತ್ತಿನ ಅಥವಾ ಮಾಡಿಕೊಳ್ಳಲಾದ ಕರಾರಿನ ಸಂಬಂಧದಲ್ಲಿ ಈಗಿರುವ ಗುತ್ತಿಗೆ ಸಂಸ್ಥೆಗಾಗಿ ಮಾಡಲಾದ ಕಾಮಗಾರಿಯಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷ ಹಿತಾಸಕ್ತಿ ಹೊಂದಿದ್ದರೆ ಅಥವಾ ಸಂಸ್ಥೆಗಾಗಿ ತಾನು ಕೊಡಬೇಕಾದ ಯಾವುದೇ ಪ್ರಕಾರದ ಬಾಕಿಯನ್ನು ಕೊಡದೆ ಉಳಿಸಿಕೊಂಡಿದ್ದರೆ.
  • ಸಂಸ್ಥೆಯ ಪರವಾಗಿ ಅಥವಾ ವಿರುದ್ಧವಾಗಿ ಕಾನೂನು ವೃತ್ತಿಗಾರನಾಗಿ ಹಾಜರಾಗುತ್ತಿದ್ದರೆ, ನೈತಿಕ ಅಧಃಪತನವನ್ನು ಒಳಗೊಳ್ಳುವ ಒಂದು ಅಪರಾಧಕ್ಕಾಗಿ ಕ್ರಿಮಿನಲ್ ನ್ಯಾಯಾಲಯದಿಂದ ಶಿಕ್ಷಿತನಾಗಿದ್ದು ಮತ್ತು ಅಂತಹ ಶಿಕ್ಷೆಯನ್ನು ಹಿಂತೆಗೆದುಕೊಂಡಿದ್ದರೆ ಅಥವಾ ಅಪರಾಧವನ್ನು ಕ್ಷಮಿಸಿರದಿದ್ದರೆ.
  • ಯಾವಾಗಲಾದರೂ ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದರೆ ಅಥವಾ ಅಂತಹ ಸಂಸ್ಥೆಯ ಅರ್ಚಕರಾಗಿ ಅಲ್ಲದೆ ಯಾವುದೇ ಪದವಿಯನ್ನು ಧಾರಣೆ ಮಾಡಿದ್ದರೆ ಅಥವಾ ಒಬ್ಬ ನೌಕರನಾಗಿದ್ದರೆ ಅಥವಾ ಅಂತಹ ಸಂಸ್ಥೆಯಿಂದ ಯಾವುದೇ ಉಪಲಬ್ಧಿಗಳನ್ನು ಅಥವಾ ಅನುವಂಶಿಕ ಲಾಭವನ್ನು ಸ್ವೀಕರಿಸುವ ವ್ಯಕ್ತಿಯಾಗಿದ್ದರೆ.
  • ಮದ್ಯಪಾನ ಅಥವಾ ಮಾದಕದ್ರವ್ಯ ವ್ಯಸನಿಯಾಗಿದ್ದರೆ, ಹಿಂದೂ ಅಲ್ಲದಿದ್ದರೆ ಅಥವಾ ಆಗಿದ್ದು ತರುವಾಯದಲ್ಲಿ ಯಾವುದೇ ಇತರೆ ಧರ್ಮಕ್ಕೆ ಪರಿವರ್ತಿತನಾಗಿದ್ದರೆ.
  • ಅವನು ಯಾವುದೇ ಅಧಿಸೂಚಿತ ಸಂಸ್ಥೆಯ ವ್ಯವಸ್ಥಾಪನಾ ಸಮಿತಿ ಸದಸ್ಯನಾಗಿ ನೇಮಕಗೊಳ್ಳಲು ಅಥವಾ ಮುಂದುವರೆಯಲು ಅನರ್ಹನಾಗಿರುತ್ತಾನೆ.

Leave a Comment