SAGARA ; ಬಸ್ಗಾಗಿ ಕಾಯುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ಶಿಕ್ಷಕಿ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಸಮೀಪ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತ ಶಿಕ್ಷಕಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿರವಂತೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಕುಂತಲಾ (29) ಎಂದು ಗುರುತಿಸಲಾಗಿದೆ.

ಶಿವಮೊಗ್ಗದಲ್ಲಿ ನಡೆಯುತ್ತಿದ್ದ ತರಬೇತಿಗೆ ಹೊರಟಿದ್ದ ಅವರು, ಚನ್ನಗಿರಿಯ ಮಾವಿನಕಟ್ಟೆಯಲ್ಲಿ ಬಸ್ಗಾಗಿ ಕಾಯುತ್ತಿದ್ದರು, ಈ ವೇಳೆ ಲಾರಿಯೊಂದು ಶಕುಂತಲಾ ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಶಕುಂತಲಾ ಅವರು ಇದೇ ವರ್ಷ ನೇಮಕಗೊಂಡು ಸಿರವಂತೆ ಶಾಲೆಯಲ್ಲಿ ಜಿಪಿಟಿ ಶಿಕ್ಷಕಿಯಾಗಿ ಇಂಗ್ಲಿಷ್ ವಿಷಯ ಬೋಧಿಸುತ್ತಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.