AJJAMPURA ; ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು, ಬಂಧಿತನಿಂದ 2.55 ಲಕ್ಷ ರೂ. ಮೌಲ್ಯದ 9 ಬೈಕ್‍ಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚನ್ನಾಪುರ ಗ್ರಾಮದ ಕೆ.ಅರುಣ್ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯಾಗಿದ್ದಾನೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ಬೈಕ್ ಕಳ್ಳತನ ಪ್ರಕರಣ ನಡೆಯುತ್ತಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಅವರು ಕಡೂರು ಪೊಲೀಸ್ ಠಾಣೆ ಪಿಎಸ್ಐ ಹಾಗೂ ಸಿಬ್ಬಂದಿ ನೇತೃತ್ವದ ತಂಡವನ್ನು ತನಿಖೆಗೆ ನೇಮಿಸಿದ್ದರು.

ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ತಂಡ ಕೂಲಿ ಕೆಲಸದ ಜತೆಗೆ ಬೆಡ್ ಶೀಟ್ ವ್ಯಾಪಾರ ಮಾಡುತ್ತಿದ್ದ ಅಜ್ಜಂಪುರ ತಾಲೂಕಿನ ಚನ್ನಾಪುರ ಗ್ರಾಮದ ಅರುಣ್ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಕಡೂರು ಪಟ್ಟಣ ಹಾಗೂ ಸುತ್ತಮುತ್ತ ಗ್ರಾಮಗಳಲ್ಲಿ ಬೈಕ್ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.