SAGARA ; ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ ಆರೋಪಿಯನ್ನು ಮಾಲು ಸಮೇತ ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ಗ್ರಾಮದ ಲೋಕೇಶ್ ಬಿನ್ ಭಾಗ್ಯಣ್ಣ ಬಂಧಿತ ಆರೋಪಿ. ಈತನಿಂದ 16 ಚಿರತೆ ಉಗುರು ಮತ್ತು 3 ಹಲ್ಲುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ವಿನಾಯಕ ಕೆ ಮತ್ತು ಸಿಬ್ಬಂದಿಗಳಾದ ಗಣೇಶ್, ವಿಶ್ವನಾಥ ಆಂಜನೇಯ ಮತ್ತು ದಿನೇಶ, ಪ್ರಮೋದಕುಮಾರಿ ರವರು ಎಸ್ ಎಸ್ ಕಾಶಿ ಎಸ್ಪಿ ಸಿಐಡಿ ಅರಣ್ಯ ಘಟಕ ಮಡಿಕೇರಿ ಇವರ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.