ಕಾಡಾನೆಗಳ ಉಪಟಳ, 11 ಗ್ರಾಮಗಳಲ್ಲಿ ನಿಷೇಧಾಜ್ಞೆ, ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ

Written by malnadtimes.com

Published on:

CHIKKAMAGALURU | ಜಿಲ್ಲೆಯ ಹಲವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದ್ದು ಕೆಲವು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ – ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಸಂಭಾವ್ಯ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

WhatsApp Group Join Now
Telegram Group Join Now
Instagram Group Join Now

ಜಿಲ್ಲೆಯ ವಸ್ತಾರೆ, ಮೂಗ್ತಿಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಹೀಗಾಗಿ ವಸ್ತಾರೆ, ಮೂಗ್ತಿಹಳ್ಳಿ ಗ್ರಾಮ ಪಂಚಾ ಯತ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಎರಡು ಗ್ರಾಮ ಪಂಚಾಯತ್ ವ್ಯಾಪ್ತಿಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಗ್ರಾಮಗಳಲ್ಲಿ ಶಾಲಾ‌ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲಾಡಳಿತದ ಆದೇಶದಲ್ಲೇನಿದೆ ?

ಕಾಡಾನೆಗಳ ಹಾವಳಿಗೆ ಕಾಫಿ, ಕಾಳುಮೆಣಸು, ಭತ್ತ, ಬಾಳೆ ಬೆಳೆ ನಾಶವಾಗುತ್ತಿವೆ. ಸದ್ಯ ಮಾರಿಕಟ್ಟೆ ಗ್ರಾಮದ ಕಾಫಿತೋಟದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ.
ಚಿಕ್ಕಮಗಳೂರು ತಾಲೂಕು ಮಗ್ನಿಹಳ್ಳಿ, ಮತ್ತು ವಸ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ರಿಯ ಗ್ರಾಮಗಳಾದ ಮತ್ತಾವರ, ದಂಬದಹಳ್ಳಿ, ಶಿರಗುಂದ, ದುಂಗೆರೆ, ಮೂಗ್ರಿಹಳ್ಳಿ, ಕದ್ರಿಮಿದ್ರಿ ಹಾಗೂ ವಸ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಗುಡ್ಡೆ, ವಸ್ತಾರೆ, ನಂದಿಕೆರೆ, ದಹುಲುವಾಲೆ, ತೊಂಡವಳಿ, ಸಂಸೆ, ದಿಣ್ಣೆಕರೆ, ಗ್ರಾಮಗಳಲಿ, ಬಿಟ್ಟು ಆನೆ ತಂಡವು ಸಂಚರಿಸುತ್ತಿದ್ದು ಸಾರ್ವಜನಿಕರ ಸುರಕ್ಷತೆ ದೃಷ್ಟಯಿಂದ ಮುಂಜಾಗ್ರತಾ ಕ್ರಮವಾಗಿ 10-11-20240 ರ ಸಂಜೆ 7ರಿಂದ 11-11-2024 ರ ರಾತ್ರಿ 9ರ ವರೆಗೆ ಕಾಡಾನೆ ಇರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾರ್ವಜನಿಕರಿಂದ ಕಾರ್ಯಾಚರಣೆಗೆ ತೊಂದರೆ ಉಂಟಾಗದಂತೆ ಸೂಕ್ತ ಭದ್ರತೆ ಒದಗಿಸಬೇಕಾಗಿ ವಲಯ ಅರಣ್ಯಾಧಿಕಾರಿ ಆಲ್ಲೂರು ವಲಯ ಚಿಕ್ಕಮಗಳೂರು ಅವರು ಕೋರಿರುತ್ತಾರೆ. ಹೀಗಾಗಿ ಮೇಲೆ ಉಲ್ಲೇಖಿಸಿರುವ ಗ್ರಾಮಗಳಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಡಳಿತದ ಆದೇಶ ತಿಳಿಸಿದೆ.

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದರಿಂದ ವಿದ್ಯಾರ್ಥಿಗಳು ಹಾಗೂ ಶಾಲಾ, ಕಾಲೇಜು ಸಿಬ್ಬಂದಿ ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Leave a Comment