SAGARA | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ಬುಧವಾರ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದು ಇಂದು ಮೂವರ ಮೃತದೇಹಗಳು ಪತ್ತೆಯಾಗಿವೆ.
ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ನಿನ್ನೆ ಈ ಒಂದು ದುರಂತ ಸಂಭವಿಸಿತ್ತು. ಸಿಗಂದೂರಿನ ಚೇತನ ಜೈನ್ (28), ಗಿಣಿವಾರದ ರಾಜು (28) ಹಾಗೂ ಹುಲಿದೇವರಬನದ ಸಂದೀಪ್ (30) ಮೃತ ದುರ್ಧೈವಿಗಳು ಎಂದು ತಿಳಿದುಬಂದಿದೆ.
ಯುವಕರ ಮೃತದೇಹ ಇದೀಗ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ :
ನಿನ್ನೆ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿದ್ದ ಚೇತನ್ ಸಂದೀಪ್ ರಾಜು ಎನ್ನುವವರು ಕಣ್ಮರೆಯಾಗಿದ್ದರು. ಇವರು ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರು ಎಂದು ತಿಳಿದು ಬಂದಿದೆ. ಈ ವೇಳೆ ಇನ್ನಿಬ್ಬರು ಯುವಕರು ದಡ ಸೇರಿದ್ದಾರೆ. ಶರಾವತಿ ಹಿನ್ನೀರಿನಲ್ಲಿ ನಾಪತ್ತೆಯಾಗಿರುವ ಮೂವರು ಯುವಕರು ಮೃತಪಟ್ಟಿದ್ದಾರೆ. ತೆಪ್ಪದಲ್ಲಿ ಒಟ್ಟು ಐವರು ಯುವಕರು ಪ್ರಯಾಣಿಸುತ್ತಿದ್ದರು. ನಿನ್ನೆಯಿಂದ ಶರಾವತಿ ನೀರಿನಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಮತ್ತು ಈಶ್ವರ್ ಮಲ್ಪೆ ತಂಡ ಶೋಧಕಾರ್ಯ ನಡೆಸಿತ್ತು. 40 ಅಡಿ ಆಳದಲ್ಲಿ ಇದೀಗ ಮೂವರು ಯುವಕರ ಮೃತದೇಹಗಳು ಪತ್ತೆಯಾಗಿವೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.