SHIVAMOGGA ; ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ರೂ. ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.
ಸೆ. 27 ರಂದು ಶಿವಮೊಗ್ಗದ ಎಲ್.ಎಸ್ ಆನಂದ್ (72) ಅವರಿಗೆ, ಅಪರಿಚಿತ ವ್ಯಕ್ತಿಯು ಸಿಬಿಐ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಹಣ ಅಕ್ರಮವಾಗಿ ವರ್ಗಾವಣೆಯಾಗಿದ್ದರಿಂದ ನಿಮ್ಮ ಮೇಲೆ ದೂರು ದಾಖಲಾಗಿದೆ. ನಿಮ್ಮನ್ನು ಅರೆಸ್ಟ್ ಮಾಡಲು ವಾರೆಂಟ್ ಜಾರಿ ಆಗಿ ನಿಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿದ್ದು, ನೀವು ಇದರಿಂದ ಹೊರ ಬರಬೇಕಾದರೇ ನಾವು ಹೇಳಿದ ಖಾತೆಗೆ ಹಣ ವರ್ಗಾವಣೆ ಮಾಡಬೇಕೆಂದು ತಿಳಿಸಿ ಒಟ್ಟು 41 ಲಕ್ಷ ರೂ.ಗಳನ್ನು ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದು, ಈ ಬಗ್ಗೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನ. 12 ಪ್ರರಕಣದ ಆರೋಪಿಗಳಾದ ಉತ್ತರಪ್ರದೇಶ ಮೊಹಮ್ಮದ್ ಅಹಮದ್ (45) ಅಭಿಶೇಕ್ ಕುಮಾರ್ ಶೇಟ್ (27) ಈ ಇಬ್ಬರನ್ನು ಬಂಧಿಸಿ ಇವರಿಂದ ಒಟ್ಟು 23,89,751 ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ಪತ್ತೆಗಾಗಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ., ಎಎಸ್ಪಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪ ಎ.ಜಿ. ಮಾರ್ಗದರ್ಶನದಲ್ಲಿ, ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆ ಡಿವೈಎಸ್ಪಿ ಕೃಷ್ಣಮೂರ್ತಿ ಕೆ. ಮೇಲ್ವಿಚಾರಣೆಯಲ್ಲಿ, ಪಿಐ ಮಂಜುನಾಥ ನೇತೃತ್ವದ ಎಎಸ್‌ಐ ಶೇಖರ್ ಮತ್ತು ಸಿಬ್ಬಂದಿಗಳಾದ ಆರ್. ವಿಜಯ್, ರವಿ ಬಿ., ಶರತ್ ಕುಮಾರ್ ಬಿ.ಎಸ್. ಅವರುಗಳನ್ನೊಳಗೊಂಡ ತನಿಖಾ ತಂಡನ್ನು ರಚಿಸಲಾಗಿತ್ತು. ಈ ತನಿಖಾ ತಂಡದ ಕಾರ್ಯವನ್ನು ಎಸ್ಪಿ ಅಭಿನಂದಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.