SHIVAMOGGA ; ಪೆಟ್ರೋಲ್ ಹಾಕುವಾಗ ಓಮ್ನಿ ವಾಹನವೊಂದು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾಪುರದಲ್ಲಿ ಇಂದು ನಡೆದಿದ್ದು 5 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಹಮ್ಮದ್ ಸಾನಾವುಲ್ಲ ಎಂಬುವರಿಗೆ ಸೇರಿದ ಓಮ್ನಿ ಕಾರು ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ ಹೊತ್ತಿ ಉರಿದಿದೆ.

ಓಮ್ನಿ ಮಂಗಳೂರು ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಬರುತ್ತಿತ್ತು. ತೀರ್ಥಹಳ್ಳಿ ರಸ್ತೆಯಲ್ಲಿ ಪೆಟ್ರೋಲ್ ಖಾಲಿಯಾಗಿತ್ತು ಎಂದು ಭರ್ತಿ ಮಾಡುತ್ತಿದ್ದ ವೇಳೆ ಹೊತ್ತಿ ಉರಿದಿದೆ.
ಓಮ್ನಿಯಲ್ಲಿದ್ದ 5 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಷಣಾರ್ಧದಲ್ಲೇ ವಾಹನ ಹೊತ್ತಿ ಉರಿದ ಹಿನ್ನಲೆ ಓರ್ವರಿಗೆ ಸಣ್ಣ-ಪುಟ್ಟ ಗಾಯವಾಗಿದೆ.

ಅಗ್ನಿಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.