HOSANAGARA ; ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರತ ಸರ್ಕಾರದ ವತಿಯಿಂದ ಸೋಮವಾರ ಆಯೋಜಿಸಿದ್ದ MSME ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ ಸಮಾರಂಭದಲ್ಲಿ ಹೊಸನಗರ ಮೂಲದ ರವಿಕುಮಾರ್ ಅವರಿಗೆ ಎಲೆಕ್ಟ್ರಿಕಲ್ ಕಂಟ್ರೊಲ್ಸ್ ಪ್ಯಾನಲ್ ತಯಾರಿಕೆಗೆ ಸಂಬಂಧಿಸಿದಂತೆ ಎಂಎಸ್ಎಂಇ ಗ್ಲೋಬಲ್ ಗೋಲ್ಡನ್ ಬಿಸಿನೆಸ್ ಎಕ್ಸ್ಲೆಂಟ್ ಅವಾರ್ಡ್ ನೀಡಿ ಗೌರವಿಸಿದೆ.

ಇವರು ಬೆಂಗಳೂರಿನಲ್ಲಿ ಅಭಿವೃದ್ದಿ ಕಂಟ್ರೊಲ್ಸ್ ಎಲೆಕ್ಟ್ರಿಕಲ್ ಕಂಟ್ರೋಲ್ಸ್ ಪ್ಯಾನೆಲ್ ಉದ್ಯಮ ನಡೆಸುತ್ತಿದ್ದು ಜೊತೆಗೆ ಅನೇಕ ಸಮಾಜಮುಖಿ ಕಾರ್ಯಗಳಾದ ಆರೋಗ್ಯ, ಕ್ರೀಡೆ, ಶಿಕ್ಷಣ ಹಾಗೂ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಸಾಧನೆಗೆ ಆತ್ಮೀಯ ವರ್ಗ ಅಭಿನಂದಿಸಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.