ಮಣಿಪಾಲ ಆರೋಗ್ಯ ಕಾರ್ಡ್ 2024 – ನೋಂದಾವಣೆಗೆ ನ.30 ಕೊನೆ ದಿನ

Written by malnadtimes.com

Published on:

HOSANAGARA ; ಮಣಿಪಾಲ ಆರೋಗ್ಯ ಕಾರ್ಡ್ 2024ರ ನೋಂದಾವಣೆಗೆ ನ.30 ಕೊನೆಯ ದಿನ ಎಂದು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. 

“ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ ಎಂದು ಆಸ್ಪತ್ರೆ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು. 

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮಣಿಪಾಲ ಆರೋಗ್ಯ ಕಾರ್ಡ್‌ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ 50% ರಿಯಾಯಿತಿ, ರೋಗ ನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ 25% ರಿಯಾಯಿತಿ, ರೇಡಿಯಾಲಜಿ, ಹೊರರೋಗಿ  ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ 20% ರಿಯಾಯಿತಿ,  ಡಯಾಲಿಸಿಸ್‌ನಲ್ಲಿ ₹ 100 ರಿಯಾಯಿತಿ, ಆಸ್ಪತ್ರೆಯ  ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್‌ನಲ್ಲಿ ಒಳರೋಗಿಗಳ ಬಿಲ್‌ಗಳಲ್ಲಿ (ಕಾನ್ಸುಮಬೆಲ್ಸ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) 25% ರಿಯಾಯಿತಿ ಸೌಲಭ್ಯವಿದೆ.  

ಮಣಿಪಾಲ ಆರೋಗ್ಯ ಕಾರ್ಡ್ 2024ರ  ಯೋಜನೆಯು “ಒಂದು  ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 350 / -, ಕೌಟಂಹಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 900/-. ಇದೊಂದು ಹೆಚ್ಚುವರಿ ಲಾಭವಾಗಿದೆ.

2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 600/-, ಕುಟುಂಬಕ್ಕೆ ₹ 950/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 1100/- ಆಗಿರುತ್ತದೆ ಎಂದು ತಿಳಿಸಿದರು. ಅಲ್ಲದೆ, ಕಾರ್ಡ್‌ದಾರರು ಕಸ್ತೂರ್ಬಾ  ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ, www.manipalhealthcard.com ಗೆ ಭೇಟಿ ನೀಡಿ ಅಥವಾ 9980854700 / 08202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಕಾರ್ಡ್ ವಿಭಾಗದ ಪ್ರತಿನಿಧಿ ಪ್ರವೀಣ್, ಸಂದೀಪ್ ಉಪಸ್ಥಿತರಿದ್ದರು. ಹೊಸನಗರದಲ್ಲಿ ಅಧಿಕೃತ ಪ್ರತಿನಿಧಿಗಳಾದ  

  • ಶ್ರೀಕಂಠ – 9483016851
  • ಶಾಂತಮೂರ್ತಿ – 94487 87820
  • ಷಣ್ಮುಖಪ್ಪ – 9591866656
  • ಕೃಷ್ಣಮೂರ್ತಿ – 8762148359
  • ಶಾರದ ವಿವಿಧೋದ್ದೇಶ ಸಹಕಾರಿ ನಿಯಮಿತ – 9480285636

ಇವರನ್ನು ಕಾರ್ಡ್ ನೋಂದಣಿಗೆ ಸಂಪರ್ಕಿಸ ಬಹುದಾಗಿದೆ ಎಂದರು.

Leave a Comment