HOSANAGARA ; ರಾಜ್ಯದ ಮೂರು ವಿಧಾನಸಭೆಯ ಉಪ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದ್ದು ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಸಿ.ಪಿ. ಯೋಗೇಶ್ವರ್, ಯಾಸಿರ್ ಪಠಾಣ್, ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಕಛೇರಿ ಹಾಗೂ ಬಸ್ ನಿಲ್ದಾಣದ ಆವರಣದಲ್ಲಿ ಸಂಭ್ರಮದಿಂದ ಪಟಾಕಿ ಸಿಡಿಸಿ ಸಹಿ ಹಂಚಿ ಸಂಭ್ರಮಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಈ ಸಂದರ್ಭದಲ್ಲಿ ಮಾತನಾಡಿ, ಈ ಮೂರು ಕ್ಷೇತ್ರದ ಗೆಲುವು ಇಡೀ ರಾಜ್ಯಕ್ಕೆ ಹರ್ಷ ತಂದಿದೆ. ನಮ್ಮ 5 ಗ್ಯಾರಂಟಿಗಳು ಹಾಗೂ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ನಾಯಕತ್ವ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಡಳಿದಿಂದ ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ. ನಮ್ಮ ವಿರೋಧ ಪಕ್ಷದವರು ಎಷ್ಟೇ ತೇಜೋವಧೆ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ.

ವಿರೋಧ ಪಕ್ಷದವರು ಮಾಡುತ್ತಿರುವ ಆಪಾದನೆಗಳು ಸುಳ್ಳು ಎಂಬುದು ಈ ಉಪ ಚುನಾವಣೆಯ ಮೂಲಕ ತಿಳಿಯುತ್ತಿದೆ. ಮುಂದಿನ ದಿನದಲ್ಲಿ ಕರ್ನಾಟಕ ರಾಜ್ಯದಲ್ಲಿ ಬಡವರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡಲಿದ್ದು ಕೆಲಸ ಮಾಡುವುದರಿಂದ ನಮ್ಮ ಗೆಲುವು ಗ್ಯಾರಂಟಿ ಎಂದು ಈ ಮೂರು ಉಪ ಚುನಾವಣೆಯಲ್ಲಿ ನಮ್ಮ ಗೆಲುವಿನಿಂದ ಗೊತ್ತಾಗುತ್ತದೆ. ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡುವುದರ ಮೂಲಕ ಜನರ ಮನಸ್ಸಿನಲ್ಲಿ ನಾವು ನೆಲೆಸೋಣ ಎಂದರು.

ಈ ಹರ್ಷ ವ್ಯಕ್ತಪಡಿಸುವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಎಂ.ಪಿ ಸುರೇಶ್, ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಟೌನ್ ಘಟಕದ ಅಧ್ಯಕ್ಷ ಗುರುರಾಜ್, ಹಿರಿಯರಾದ ಪ್ರಭಾಕರ್, ಶ್ರೀನಿವಾಸ್ ಕಾಮತ್, ಬೃಂದಾವನ ಪ್ರವೀಣ್, ಕಳೂರು ಕೃಷ್ಣಮೂರ್ತಿ ಅಬೇದುಲ್ಲ, ಚಂದ್ರಮೂರ್ತಿ, ಜಯನಗರ ಗುರು, ಚಂದ್ರಕಲಾ ನಾಗರಾಜ್, ನೂರ ಮೇಟಿಲ್ಡಾ ಸ್ವಿಕ್ವೇರಾ, ಮಹಾದೇವ ಶೆಟ್ಟಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.