ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ; ಪ್ರಯಾಣಿಕರಿಗೆ ಗಾಯ !

Written by Mahesha Hindlemane

Published on:

KALASA ; ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ಕಗ್ಗನಾಳ ಬಳಿ ಸಂಭಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊರನಾಡಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ ಸರ್ಕಾರಿ ಬಸ್ ಹಾಗೂ ಬಾಳೆಹೊನ್ನೂರಿನಿಂದ ಕಳಸಕ್ಕೆ ತೆರಳುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಗ್ಗನಾಳ ಬಳಿಯ ಕಿರು ಸೇತುವೆ ಸಮೀಪವೇ ಈ ಅಪಘಾತ ನಡೆದಿದ್ದು ಘಟನೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸ್ಥಳಕ್ಕೆ ಬಂದ ಪೊಲೀಸರು ಸಂಚಾರ ಸುಗಮಗೊಳಿಸಿದ್ದಾರೆ. ಈ ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Comment