RIPPONPETE ; ಇಲ್ಲಿಗೆ ಸಮೀಪದ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಜೇನಿಯಲ್ಲಿ ಚಿದಾನಂದ ಎಂಬುವರ ಅಂಗಡಿಗೆ ಭಾನುವಾರ ರಾತ್ರಿ ಅಂಗಡಿ ಮಾಲೀಕ ಬಾಗಿಲು ಮುಚ್ಚಿಕೊಂಡು ಮನೆಗೆ ಹೋದ ನಂತರದಲ್ಲಿ ಕಳ್ಳರು ಅಂಗಡಿಯ ಹೆಂಚನ್ನು ತೆಗೆದು ಒಳಗಡೆ ನುಗ್ಗಿ 2500 ನಗದು ಹಣ ಹಾಗೂ ಕೋಳಿ ಅಂಗಡಿಯಲ್ಲಿದ್ದ 10 ಕೋಳಿಗಳನ್ನು ತೆಗೆದುಕೊಂಡು ಹೋಗುವುದರ ಜೊತೆಗೆ ಅಂಗಡಿಯಲ್ಲಿದ್ದ ಕೆಲವು ವಸ್ತುಗಳನ್ನು ಹೊತ್ತೊಯ್ದ ಘಟನೆ ನಡೆದಿದೆ.

ಸೋಮವಾರ ಬೆಳಗ್ಗೆ ಚಿದಾನಂದ ಎಂದಿನಂತೆ ಬಂದು ಅಂಗಡಿ ಬಾಗಿಲು ತೆಗೆದು ನೋಡಿದಾಗ ಕಳ್ಳತನವಾಗಿರುವುದು ತಿಳಿದುಬಂದಿದ್ದು, ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.