ಹೊಸನಗರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ | ಮಕ್ಕಳಲ್ಲಿನ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ; ಶಾಸಕ ಬೇಳೂರು ಗೋಪಾಲಕೃಷ್ಣ

Written by malnadtimes.com

Published on:

HOSANAGARA ; ಮಕ್ಕಳಲ್ಲಿನ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು ತೀರ್ಪುಗಾರರು ನಿಷ್ಪಕ್ಷಪಾತವಾಗಿ ಪ್ರತಿಭೆಯನ್ನು ಗುರುತಿಸಬೇಕು ಹಾಗೂ ಪೋಷಕ ವರ್ಗದವರ ಸಂಪೂರ್ಣ ಬೆಂಬಲ ನೀಡಿದರೆ ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧಿಸಲು ಸಾಧ್ಯ ಎಂದು ಹೊಸನಗರ-ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

WhatsApp Group Join Now
Telegram Group Join Now
Instagram Group Join Now

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಪಟ್ಟಣದ ಹೋಲಿ ರಿಡೀಮರ್ ಶಾಲೆಯ ಆವರಣದಲ್ಲಿ ಶಿಕ್ಷಣ ಇಲಾಖೆಯವರ ವತಿಯಿಂದ ಏರ್ಪಡಿಸಲಾಗಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳನ್ನು ಸುಸಂಸ್ಕೃತ ನಾಗರೀಕರನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಣದೊಂದಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಪಾಲ್ಗೊಳ್ಳುವುದರಿಂದ ಬುದ್ದಿಮಟ್ಟವು ಹೆಚ್ಚಾಗುತ್ತದೆ. ಎಸ್ಎಸ್ಎಲ್ಸಿ ಪರಿಕ್ಷೆಯಲ್ಲಿ ನಮ್ಮ ಜಿಲ್ಲೆಯೆ ಪ್ರಥಮ ಸ್ಥಾನ ಗಳಿಸಬೇಕು ಈ ನಿಟ್ಟಿನಲ್ಲಿ ಶಿಕ್ಷಕರು ಶ್ರಮವಹಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್ ಕೃಷ್ಣಮೂರ್ತಿ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿ 19 ಕ್ಲಸ್ಟರ್ ಮಟ್ಟದಿಂದ ಜಯಶೀಲರಾಗಿ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದಾರೆ. ಇಂತಹ ಪ್ರತಿಭೆಗಳನ್ನು ಗುರುತಿಸುವ ಕಾರ್ಯ ಸರ್ಕಾರ ಮಾಡುತ್ತಿದ್ದು ಇದಕ್ಕೆ ನಮ್ಮ ಸಿ.ಆರ್.ಪಿಗಳು ಶ್ರಮವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದ್ದಾರೆ ಎಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಸ್ಟರ್ ವಾಯ್ಲೆಟ್ ಅಂದ್ರಾದೆ ವಹಿಸಿದ್ದರು. ತಹಶೀಲ್ದಾರ್ ರಶ್ಮಿ ಹಾಲೇಶ್, ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ದೈಹಿಕ ಶಿಕ್ಷಕ ಶಿಕ್ಷಣ ಪರಿವೀಕ್ಷಕರಾದ ಬಾಲಚಂದ್ರರಾವ್, ಸಹಾಯಕ ನಿರ್ದೇಶಕರಾದ ಶೇಷಾಚಲ ಜಿ.ನಾಯ್ಕ್, ಮುಖ್ಯ ಶಿಕ್ಷಕರಾದ ಸಿಸ್ಟರ್ ವಿಲ್ಯಾ ಪಿಂಟೂ, ಸಿಸ್ಟರ್ ಪ್ಲೇವಿ ರೂಡ್ರಿಗಸ್, ಸಮಾನ್ವಯಾಧಿಕಾರಿ ರಂಗನಾಥ್, ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಆರ್. ಸುರೇಶ್, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರೇಣುಕೇಶ್, ನೋಡಲ್ ಅಧಿಕಾರಿ ಕರಿಬಸಪ್ಪ, ಚಂದ್ರಮೌಳಿ ಗೌಡ, ಪಟ್ಟಣ ಪಂಚಾಯತಿ ಅಧ್ಯಕ್ಷ ನಾಗಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವೀಣ್ ಕುಮಾರ್, ಕಾಲಸಸಿ ಸತೀಶ, ದಿವ್ಯ ಪ್ರವೀಣ್, ಪುಟ್ಟಸ್ವಾಮಿ, ಕಮಲಾಕರ್, ಧನುಂಜಯ, ರಾಮಕೃಷ್ಣ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a Comment