ಭಾರಿ ಮಳೆ ಹಿನ್ನೆಲೆ ; ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ

Written by malnadtimes.com

Published on:

CHIKKAMAGALURU ; ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಕಂಟ್ರೋಲ್ ರೂಂ ತೆರೆದಿದೆ. ಸಹಾಯಕ್ಕಾಗಿ ಕಂಟ್ರೋಲ್ ರೂಂ ನಂಬರ್ ‌08262 238950ಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ.

WhatsApp Group Join Now
Telegram Group Join Now
Instagram Group Join Now

ಕಾಫಿನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಂಗಳವಾರ ಒಂದು ದಿನ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಡಿಸೆಂಬರ್ 3ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನದಿ, ತಗ್ಗು ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಗುಡ್ಡ, ಇಳಿಜಾರು ಪ್ರದೇಶಗಳ ಜನರು ಜಾಗೃತರಾಗಿರುವಂತೆ ಸೂಚನೆ ನೀಡಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದ್ದಾರೆ.

ಚಂಡಮಾರುತದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮಾತ್ರವಲ್ಲದೆ ಹಾಸನ, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೊಡಗಿನಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಉಡುಪಿ, ದಕ್ಷಿಣ ಕನ್ನಡದಲ್ಲಿ ಆರೆಂಜ್​ ಅಲರ್ಟ್​ ನೀಡಲಾಗಿದೆ.

ಇನ್ನೂ ಶಿವಮೊಗ್ಗ ಜಿಲ್ಲಾದ್ಯಂತ ಸೋಮವಾರ ಮೋಡ ಕವಿದ ವಾತಾವರಣ ಉಂಟಾಗಿತ್ತು. ಹಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ.

Leave a Comment