SAGARA ; ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಪಂ ವ್ಯಾಪ್ತಿಯ ನೇದರವಳ್ಳಿ ಗ್ರಾಮದ ಯುವ ವಿಜ್ಞಾನಿ ಕವನಶ್ರೀ ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಜ್ಞಾನಿಯಾಗಿ ಆಯ್ಕೆಗೊಂಡಿದ್ದು, ಸೋಮವಾರ ಸ್ವಿಡ್ಜರ್‌ಲೆಂಡ್‌ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಭಾರತದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆದ 8 ಅಭ್ಯರ್ಥಿಗಳಲ್ಲಿ ಆಯ್ಕೆಯಾದ ಕವನಶ್ರೀ, ನೇದರವಳ್ಳಿಯ ಪ್ರಗತಿಪರ ಕೃಷಿಕ ಶುಂಠಿ ಮಂಜಪ್ಪ ಮತ್ತು ಜಯಲಕ್ಷ್ಮೀ ದಂಪತಿಗಳ ಪುತ್ರಿ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.