ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಗಲಿಕೆಗೆ ರಂಭಾಪುರಿ ಜಗದ್ಗುರುಗಳ ಸಂತಾಪ

Written by malnadtimes.com

Published on:

N.R.PURA ; ರಾಜ್ಯದ ಮುಖ್ಯ ಮಂತ್ರಿಯಾಗಿ ಕೇಂದ್ರದ ವಿದೇಶಾಂಗ ಸಚಿವರಾಗಿ ಮಹಾರಾಷ್ಟ್ರದ ರಾಜ್ಯಪಾಲರಾಗಿ, ರಾಜ್ಯ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ ಪದ್ಮಭೂಷಣ ಎಸ್.ಎಂ.ಕೃಷ್ಣ ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಎಸ್.ಎಂ.ಕೃಷ್ಣ ಅವರು ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿರುವುದನ್ನು ಮರೆಯಲಾಗದು. ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಿದ ಗುರು-ವಿರಕ್ತರ ಸಮಾವೇಶಕ್ಕೆ ಆಗಮಿಸಿ ಸಮಾರಂಭ ಉದ್ಘಾಟಿಸಿದ್ದು ತಮ್ಮ ಮನದಲ್ಲಿ ಹಸಿರಾಗಿದೆ. ನಂತರದ ದಿನಗಳಲ್ಲಿಯೂ ಸಹ ಅವರು ಶ್ರೀ ಪೀಠಕ್ಕೆ ಆಗಮಿಸಿ ಜಗದ್ಗುರುಗಳ ಆಶೀರ್ವಾದ ಪಡೆದು ಹೋಗಿದ್ದಾರೆ.

ಹಲವಾರು ಸಮಾರಂಭಗಳಲ್ಲಿ ಅವರು ಭಾಗವಹಿಸಿದ್ದು ತಮ್ಮ ಮನದಲ್ಲಿ ಹಸಿರಾಗಿದೆ. ಅವರು ಮುತ್ಸದ್ದಿ ರಾಜಕಾರಣಿಯಾಗಿದ್ದರು. ಸರಳತೆ ಮತ್ತು ಸೌಜನ್ಯತೆಯ ನಡವಳಿಕೆ ಹೊಂದಿದ್ದ ಅವರ ಅಗಲಿಕೆ ತಮಗೆ ನೋವನ್ನುಂಟು ಮಾಡಿದೆ.

ದಯಾಘನನಾದ ಪರಮಾತ್ಮನು ಅವರ ಅಗಲಿದ ಪವಿತ್ರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೂ ಅವರ ಅಭಿಮಾನಿಗಳಿಗೂ ನೀಡಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Comment