HOSANAGARA ; ಕರ್ನಾಟಕದ ದಕ್ಷ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಎಸ್.ಎಂ. ಕೃಷ್ಣ ಅನಾರೋಗ್ಯದಿಂದ ನಿಧನರಾಗಿದ್ದು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಸ್.ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಾರ್ಯಕ್ರಮವನ್ನು ಅಂದೇ ಜಾರಿಗೆ ತಂದು ಎಲ್ಲ ಶಾಲೆ ಮಕ್ಕಳು ಹಸಿವಿನಿಂದ ಇರಬಾರದು ಎಂದು ಬಿಸಿಯೊಟ ಜಾರಿಗೆ ತಂದವರು. ಡಾ|| ರಾಜ್‌ಕುಮಾರ್‌ರನ್ನು ವೀರಪ್ಪನ್ ಅಪಹರಿಸಿದ್ದಾಗ ಜನರು ದುಃಖದಲ್ಲಿರುವಾಗ ರಾಜ್ಯದ ಜನತೆಗೆ ಧೈರ್ಯ ತುಂಬಿ ಡಾ|| ರಾಜ್‌ಕುಮಾರ್‌ರವರನ್ನು ಕಷ್ಟದಿಂದ ಪಾರು ಮಾಡಿದವರು.

ಇವರು ಮುಖ್ಯಮಂತ್ರಿಯಾದ ಸಮಯದಲ್ಲಿ ಕರ್ನಾಟಕದ ಉತ್ತಮ ಆಳ್ವಿಕೆ ನಡೆಸಿ ಯಾವುದೇ ಪಕ್ಷ ಭೇದವಿಲ್ಲದೆ ಜನ ಸೇವೆ ಮಾಡಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಡೆದವರಾಗಿದ್ದು ಇವರ ನಿಧನದಿಂದ ಇಡೀ ರಾಜ್ಯ ಜನತೆ ದುಃಖಭರಿತರಾಗಿದ್ದಾರೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.