SHIKARIPURA ; ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳದಲ್ಲಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ದಂಪತಿ ನಡುವೆ ರಾತ್ರಿ ಇಡೀ ಜಗಳ ನಡೆದಿದ್ದು, ಬೆಳಗಿನಜಾವ ನಾಲ್ಕು ಗಂಟೆ ಸುಮಾರಿಗೆ ನಾಗರಾಜ ತನ್ನ ಪತ್ನಿ ರೇಣುಕಾಳನ್ನು ಕಂದಲಿಯಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ನಾಗರಾಜ್ ಪ್ಯಾಸೆಂಜರ್ ಆಟೋ ಓಡಿಸಿ ಜೀವನ ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದೆ.
ಮೃತ ರೇಣುಕಾಳ ಶವ ಮನೆ ಮುಂಭಾಗದಲ್ಲಿ ಪತ್ತೆಯಾಗಿದ್ದು, ಆರೋಪಿ ನಾಗರಾಜನನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.