HOSANAGARA ; ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿಯ ಗೊರಗೋಡಿನ ದಿ. ಗಂಗಾಧರಪ್ಪ ಗೌಡರ ಪುತ್ರ ಮಹೇಶಗೌಡ (56) ಬುಧವಾರ ಸಂಜೆ ಕಾರ್ಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಅಡಿಕೆ ಕೊಯ್ಲಿನ ಸಂದರ್ಭವಾದ್ದರಿಂದ ಕೊಯ್ಲುಕತ್ತಿ ರಿಪೇರಿ ಮಾಡಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಜಾನುವಾರುಗಳು ಅಡ್ಡ ಬಂದು ಅವರ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಹೇಶಗೌಡರನ್ನು ಹೊಸನಗರದಲ್ಲಿ ಚಿಕಿತ್ಸೆಗೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಮಹೇಶಗೌಡ ಪತ್ನಿ, ಇಬ್ಬರು ಪುತ್ರರು, ಅಪಾರ ಬಂಧು-ಬಳಗದವರು ಸ್ನೇಹಿತ ವರ್ಗದವರನ್ನು ಅಗಲಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.