ಮಾರಣಾಂತಿಕ ಹಲ್ಲೆಗೊಳಗಾದ ನಿಟ್ಟೂರು ಗ್ರಾಪಂ ಸದಸ್ಯ ವಿಶ್ವನಾಥ್ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

Written by malnadtimes.com

Published on:

HOSANAGARA ; ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು.

WhatsApp Group Join Now
Telegram Group Join Now
Instagram Group Join Now

ಅಲ್ಲದೆ, ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಕಿಮ್ಮನೆ, ತಪ್ಪಿತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ನನ್ನನ್ನು ಸೇರಿದಂತೆ ಇಡೀ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆಗಿದೆ ಹಾಗೂ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದಿರಿ ಎಂಬುದಾಗಿ ಮಾಜಿ ಸಚಿವರು ನಾಗೋಡಿ ವಿಶ್ವನಾಥ್ ಅವರಿಗೆ ಧೈರ್ಯ ತುಂಬಿದರು.

Leave a Comment