THIRTHAHALLI ; ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮೃತನು ವಾರಳ್ಳಿ ದಿನೇಶ್ ರವರ ಪುತ್ರ ಎಂದು ತಿಳಿದುಬಂದಿದೆ. ಕುರುವಳ್ಳಿ ಪ್ರಮೋದ್ ಪೂಜಾರಿ ಮೃತದೇಹವನ್ನು ಹೊರತರುವಲ್ಲಿ ಯಶಸ್ವಿಯಾಗಿದ್ದು ಆಗುಂಬೆ ಪೊಲೀಸ್ ಠಾಣೆಯ ಪಿಎಸ್ಐ ರಂಗನಾಥ್ ಅಂತರಗಟ್ಟಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.