SRINGERI ; ಅಸ್ಸಾಂ ಮೂಲದ ಅಪ್ರಾಪ್ತ ಕಾರ್ಮಿಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ಈಗ ಆರೋಗ್ಯ ತಪಾಸಣೆ ವೇಳೆ ಬೆಳಕಿಗೆ ಬಂದಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತ ತೆಕ್ಕೂರಿನ ಎಸ್ಟೇಟ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ.
ಆರೋಪಿಯೂ ಅಪ್ರಾಪ್ತನಾಗಿದ್ದು 17 ವರ್ಷದವನಾಗಿದ್ದಾನೆ ಎಂದು ತಿಳಿದು ಬಂದಿದ್ದು ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.