BHADRAVATHI ; ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ನಡೆದಿದೆ.
ಕಲ್ಲಿಹಾಳ್ ಗ್ರಾಮದ ಸಹನಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಟಿವಿ ರಿಮೋಟ್‍ಗಾಗಿ ಇಬ್ಬರು ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಸಹನಾ ಅಜ್ಜಿ ಮನೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.